Monday, November 25, 2024
Homeರಾಜ್ಯಅರಿಶಿನ-ಕುಂಕುಮ ಆದೇಶಕ್ಕೆ ಸ್ಪಷ್ಟನೆ ಕೊಟ್ಟ ಸಿಎಂ

ಅರಿಶಿನ-ಕುಂಕುಮ ಆದೇಶಕ್ಕೆ ಸ್ಪಷ್ಟನೆ ಕೊಟ್ಟ ಸಿಎಂ

ಬೆಂಗಳೂರು, ಅ.19- ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಹೊಸದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.

ವಿಧಾನಸೌಧ ಮತ್ತು ವಿಕಾಸಸೌಧ ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯಲಿದೆ. ಈ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ, ಇದು ಹೊಸತೇನಲ್ಲ ಎಂದಿದ್ದಾರೆ.

ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ. ಜೊತೆಯಲ್ಲಿ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2021ರ ಅಕ್ಟೋಬರ್ 12ರಂದು ಹೊರಡಿಸಿದ್ದ ಸುತ್ತೋಕೆ ಹಾಗೂ ಸೆಪ್ಟಂಬರ್ 30ರಂದು ಹೊರಡಿಸಲಾಗಿರುವ ಸುತ್ತೋಲೆ ಎರಡನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಹೆಣ್ಣುಮಕ್ಕಳು ಬಳೆ ತೊಡಬಾರದು ಎಂದು ಆದೇಶ ಹೊರಡಿಸಿದೆ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ, ಹಿಂದು ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂದು ಪ್ರಚಾರ ಮಾಡಲಾಯಿತು. ಆ ದೇಶ ಕೂಡ ಕೇಂದ್ರ ಸರ್ಕಾರದ ಸುತ್ತೋಲೆ ಆಧಾರಿತವಾಗಿತ್ತು ಎಂದು ಸ್ಪಷ್ಟನೆ ದೊರೆತ ಬಳಿ ಟೀಕಾಕಾರರು ತಣ್ಣಗಾದರು.

ರಾಹುಲ್ ಅಣತಿಯಂತೆ ಹಮಾಸ್‍ಗೆ ಕಾಂಗ್ರೆಸ್ ಬೆಂಬಲಿಸಿದೆ ; ಹಿಮಂತ್ ಬಿಸ್ವಾ

ಈ ಮತ್ತೊಮ್ಮೆ ದಸರಾ-ಆಯುಧ ಪೂಜೆ ಸಂದರ್ಭದಲ್ಲಿ ಕುಂಕುಮ, ಹರಿಶಿನ ಬಳಸಬಾರದು ಎಂಬ ಆದೇಶವನ್ನು ಕಾಂಗ್ರೆಸ್ ಸರ್ಕಾರವೇ ಹೊರಡಿಸಿದೆ ಎಂದು ಪ್ರಚಾರ ಮಾಡಲಾಗಿದೆ. ಅದಕ್ಕೂ ಹಿಂದಿನ ಸರ್ಕಾರದ ಆದೇಶವನ್ನು ಬಯಲುಗೊಳಿಸುವ ಮೂಲಕ ಮುಖ್ಯಮಂತ್ರಿ ಬಿಜೆಪಿ ಟಾಂಗ್ ನೀಡಿದ್ದಾರೆ.

RELATED ARTICLES

Latest News