Friday, November 22, 2024
Homeರಾಜ್ಯರಾಜ್ಯದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಅಂತರ್ಜಲ : ಪ್ರಿಯಾಂಕ್‌ ಖರ್ಗೆ ಆತಂಕ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಅಂತರ್ಜಲ : ಪ್ರಿಯಾಂಕ್‌ ಖರ್ಗೆ ಆತಂಕ

ಬೆಂಗಳೂರು,ಜು.19- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಂತರ್ಜಲ ಕುಸಿಯುತ್ತಿರುವ ಹಿನ್ನಲೆಯಲ್ಲಿ ಭವಿಷ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸೆಂಟರ್‌ ಆಫ್‌ ಎಕ್ಸಲೆನ್ಸ್ ಪ್ರಾರಂಭಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ವಿಧಾನಪರಿಷತ್‌ನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರು ಅಂತರ್ಜಲ ಕುಸಿಯುತ್ತಿರುವ ಬಗ್ಗೆ ಗಮನಸೆಳೆದಾಗ ಅಂತರ್ಜಲ ಅತಿಹೆಚ್ಚು ಕುಸಿಯುತ್ತಿರುವ ರಾಜ್ಯಗಳಲ್ಲಿ ರಾಜಸ್ಥಾನದ ನಂತರ ಕರ್ನಾಟಕ ಸ್ಥಾನ ಪಡೆದುಕೊಂಡಿದೆ. ಇದು ಅತ್ಯಂತ ಅಪಾಯಕಾರಿ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

ಮಲೆನಾಡು, ಕರಾವಳಿ ತೀರಾಪ್ರದೇಶಗಳನ್ನು ಹೊಂದಿದ್ದರೂ ಕರ್ನಾಟಕದಲ್ಲಿ ಅಂತರ್ಜಲ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕುಸಿಯುತ್ತಿದೆ. ಹೀಗಾಗಿ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ಐಟಿಬಿಟಿ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯತೆಯಲ್ಲಿ ಈ ಕೇಂದ್ರದಲ್ಲಿ ಸ್ಥಾಪಿಸುತ್ತೇವೆ ಎಂದರು.

ಇದು ಕನಿಷ್ಠಪಕ್ಷ 3ರಿಂದ 4 ತಿಂಗಳೊಳಗೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ. ಅಲ್ಲಿಂದ ಅನುಮೋದನೆ ಸಿಕ್ಕ ತಕ್ಷಣ ಕಾರ್ಯಾರಂಭ ಆಗಲಿದೆ ಎಂದು ಹೇಳಿದರು.

2050ಕ್ಕೆ ದೇಶದಲ್ಲಿ ಅಂತರ್ಜಲ ಪ್ರಮಾಣ ತೀವ್ರವಾಗಿ ಕುಸಿಯಲಿದೆ. ನಾವು ಮುಂದಿನ 100 ವರ್ಷವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕು. ಎಲ್ಲಿ ನೀರಿನ ಮೌಲ್ಯ ಲಭ್ಯವಿದೆಯೋ ಅದನ್ನು ಬಳಸಿಕೊಳ್ಳಲಿದ್ದೇವ ಎಂದರು.

RELATED ARTICLES

Latest News