ನವದೆಹಲಿ,ಅ.19-ಅಬಕಾರಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಬಂಧನದ ಅವಯನ್ನು ನ್ಯಾಯಾಲಯ ಇದೇ ತಿಂಗಳ 22ರವರೆಗೆ ವಿಸ್ತರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಸಲ್ಲಿಸಲಾದ ಆರೋಪ ಪಟ್ಟಿಯಲ್ಲಿನ ದಾಖಲೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿತು.
ಮೆಟ್ರೋದಲ್ಲಿ ಸ್ಟಂಟ್ ಮಾಡಿದ ವಿದ್ಯಾರ್ಥಿಗೆ ಬಿತ್ತು ದಂಡ
ಆರೋಪಿಗಳ ಪರ ವಕೀಲರು ದಾಖಲೆಗಳು ಸರಿಯಾಗಿಲ್ಲದ ಕಾರಣ ಅವುಗಳನ್ನು ಪರಿಶೀಲಿಸಲು ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಎರಡು ಕಡೆ ವಾದ-ವಿವಾದ ಆಲಿಸಿದ ನ್ಯಾಯಾಲಯ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಈ ತಿಂಗಳ 22ಕ್ಕೆ ವಿಸ್ತರಿಸಿ ಆದೇಶ ಹೊರಡಿಸಿದೆ.