ಬೆಂಗಳೂರು,ಜು.21- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉತ್ತರಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಸಂಭವಿಸಿದ ಮಳೆ ಹಾನಿಗಳ ಪ್ರದೇಶಗಳ ವೀಕ್ಷಣೆ ನಡೆಸಿದರು. ಭಾನುವಾರ ರಜಾದಿನ ಕೂಡ ವಿಶ್ರಾಂತಿ ಪಡೆಯದೆ ಸಿಎಂ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು ಗಮನಸೆಳೆಯಿತು.
ಕಳೆದ ಹತ್ತು ದಿನಗಳಿಂದ ನಿರಂತವಾಗಿ ಮಳೆ ಸುರಿಯುತ್ತಿದ್ದು, ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ, ಮೈಸೂತು, ಕೊಡುಗು ಸೇರಿದಂತೆ ಹಲವು ಪ್ರದೇಶಗಳಲ್ಲಿ ನೆರೆಯ ವಾತಾವರಣ ಸೃಷ್ಟಿಯಾಗಿದೆ.
ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರಿಂದ ಸಂಪುಟದ ಸಚಿವರು, ಶಾಸಕರು, ಮುಖ್ಯಮಂತ್ರಿಗಳು ಬೆಂಗಳೂರಿನಲ್ಲೇ ಉಳಿದಿದ್ದರು. ಈ ನಡುವೆ ಉತ್ತರಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನಲ್ಲಿ ಶಿರೂರಿನಲ್ಲಿ ಭೂ ಕುಸಿತವಾಗಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಳಕ್ಕೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಗೋವಾಕ್ಕೆ ತೆರಳಿ ಅಲ್ಲಿಂದ ರಸ್ತೆ ಮೂಲಕ ಶಿರೂರಿಗೆ ಭೇಟಿ ನೀಡಿದ್ದಾರೆ. ಮಳೆಯಿಂದ ಸಂಕಷ್ಟಕ್ಕೀಡದ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ. ಬಳಿಕ ಜಿಲ್ಲಾಡಳಿತದ ಅಧಿಕಾರಿಗಳು, ನೌಕಾದಳ, ಕರ್ನಾಟಕ ವಿದ್ಯುತ್ ಉತ್ಪಾದನಾ ಸಂಸ್ಥೆ, ರಾಷ್ಟ್ರೀಯ ವಿದ್ಯುತ್ ಉತ್ಪಾದನಾ ಸಂಸ್ಥೆ-ಕೈಗಾ ಅ„ಕಾರಿಗಳ ಜೊತೆ ಸಭೆ ನಡೆಸಲಿದ್ದು, ಹೆದ್ದಾರಿ ನಿರ್ಮಾಣದಲ್ಲಿನ ಲೋಪದೋಷಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ರಾಷ್ಟ್ರೀಯ ಸಂಸ್ಥೆಗಳಾದ ನೌಕಾದಳ, ಕೈಗಾ ಅ„ಕಾರಿಗಳು ರಾಜ್ಯ ಸರ್ಕಾರದ ಅಧಿಕಾರಿಗಳ, ಶಾಸಕರ, ಸಚಿವರ ಮಾತಿಗೆ ಮನ್ನಣೆ ನೀಡುತ್ತಿಲ್ಲ ಎಂಬ ಆಕ್ಷೇಪಗಳಿರುವುದರಿಂದ ಇಂದು ಮುಖ್ಯಮಂತ್ರಿಯವರೇ ಸ್ಥಳಕ್ಕೆ ಭೇಟಿ ನೀಡಿ ಸಭೆ ನಡೆಸಿದ್ದಾರೆ.