Friday, November 22, 2024
Homeರಾಷ್ಟ್ರೀಯ | NationalUnion Budget 2024 Updates : ಚಿನ್ನ ಮತ್ತು ಬೆಳ್ಳಿ ಮೇಲಿನ ಕಸ್ಟಮ್ಸ್ ಸುಂಕ ಇಳಿಕೆ

Union Budget 2024 Updates : ಚಿನ್ನ ಮತ್ತು ಬೆಳ್ಳಿ ಮೇಲಿನ ಕಸ್ಟಮ್ಸ್ ಸುಂಕ ಇಳಿಕೆ

ನವದೆಹಲಿ, ಜು.23- ಚಿನ್ನ ಮತ್ತು ಬೆಳ್ಳಿ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇಕಡಾ 6 ಕ್ಕೆ ಮತ್ತು ಪ್ಲಾಟಿನಂ ಅನ್ನು ಶೇಕಡಾ 6.4ಕ್ಕೆ ಇಳಿಕೆ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಇಂದು ಲೋಕಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು, ಫೋರೋನಿಕಲï, ಬ್ಲಿಸ್ಟರ್ ತಾಮ್ರದ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ತೆಗೆದುಹಾಕುವುದಾಗಿ ಘೋಷಿಸಿದ್ದು, ಆದರೆ ನಿಗದಿತ ಟೆಲಿಕಾಂ ಉಪಕರಣಗಳ ಮೇಲಿನ ಸುಂಕವನ್ನು ಶೇ.10ರಿಂದ ಶೇಕಡಾ 15ಕ್ಕೆ ಹೆಚ್ಚಿಸಲಾಗಿತ್ತು.

ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂ ಮೂಲ ಕಸ್ಟಮ್ಸ್ ಸುಂಕವನ್ನು ಕಡಿತಗೊಳಿಸುವುದು ರತ್ನಗಳು ಮತ್ತು ಆಭರಣ ಉದ್ಯಮದ ಬಹುಕಾಲದ ಬೇಡಿಕೆಯಾಗಿದೆ. ಸೀಗಡಿಗಳು ಮತ್ತು ಮೀನಿನ ಆಹಾರದ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇಕಡಾ 5ಕ್ಕೆ ಇಳಿಸಲು ಪ್ರಸ್ತಾಪಿಸಿದರು. ಮತ್ತೊಂದೆಡೆ ಸರ್ಕಾರವು ಅಮೋನಿಯಂ ನೈಟ್ರೇಟ್ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇಕಡಾ 10ಕ್ಕೆ ಮತ್ತು ಜೈವಿಕ ವಿಘಟನೀಯವಲ್ಲದ ಪ್ಲಾಸ್ಟಿಕ್‍ಗಳ ಮೇಲೆ ಶೇ.25ಕ್ಕೆ ಏರಿಸಲಿದೆ ಎಂದು ಅವರು ಹೇಳಿದರು.

ಎಂಎಸ್‍ಎಂಇಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಪಿಪಿಪಿ (ಸಾರ್ವಜನಿಕ ಖಾಸಗಿ ಸಹಭಾಗಿತ್ವ) ಮೋಡ್‍ನಲ್ಲಿ ಇ-ಕಾಮರ್ಸ್ ರಫ್ತ್ತು ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಸಾಂಪ್ರದಾಯಿಕ ಕುಶಲಕರ್ಮಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಾರೆ ಎಂದು ಅವರು ಹೇಳಿದರು.

ಸೌರ ಕೋಶಗಳು ಮತ್ತು ಪಲಕಗಳ ತಯಾರಿಕೆಯಲ್ಲಿ ಬಳಸಲಾಗುವ ವಿನಾಯಿತಿ ಪಡೆದ ಬಂಡವಾಳ ಸರಕುಗಳ ಪಟ್ಟಿಯನ್ನು ವಿಸ್ತರಿಸಲು ಅವರು ಪ್ರಸ್ತಾಪಿಸಿದ್ದಾರೆ.

RELATED ARTICLES

Latest News