ಸುಲ್ತಾನ್‌ಪುರ, ಜು.25 (ಪಿಟಿಐ) ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಇಲ್ಲಿನ ಜನಪ್ರತಿನಿಧಿ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿ ಅವರು ನಾಳೆ ಬೆಳಗ್ಗೆ 9 ಗಂಟೆಗೆ ಲಖನೌ ವಿಮಾನ ನಿಲ್ದಾಣಕ್ಕೆ ಬಂದಿಳಿದು ನಂತರ ಸುಲ್ತಾನ್‌ಪುರಕ್ಕೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭಿಷೇಕ್ ಸಿಂಗ್ ರಾಣಾ ತಿಳಿಸಿದ್ದಾರೆ.
ಸ್ಥಳೀಯ ಭಾರತೀಯ ಜನತಾ ಪಕ್ಷದ ನಾಯಕ ವಿಜಯ್ ಮಿಶ್ರಾ ಅವರು 2018 ರಲ್ಲಿ ಆಗಿನ ಬಿಜೆಪಿ ಅಧ್ಯಕ್ಷ ಮತ್ತು ಪ್ರಸ್ತುತ ಗಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಗಾಂಧಿ ವಿರುದ್ಧ 2018 ರಲ್ಲಿ ರಾಹುಲ್‌ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಫೆಬ್ರವರಿ 20 ರಂದು ನ್ಯಾಯಾಲಯವು ಗಾಂಧಿಗೆ ಜಾಮೀನು ನೀಡಿತ್ತು. ವಿಶೇಷ ವ್ಯಾಜಿಸ್ಟ್ರೇಟ್ ಶುಭಂ ವರ್ಮಾ ಅವರು ಜುಲೈ 26 ರಂದು ತಮ ಹೇಳಿಕೆಯನ್ನು ದಾಖಲಿಸಲು ಗಾಂಧಿ ಅವರಿಗೆ ಸಮನ್‌್ಸ ನೀಡಿದ್ದಾರೆ ಹೀಗಾಗಿ ನಾಳೆ ರಾಹುಲ್‌ಗಾಂಧಿ ಅವರು ಖುದ್ದು ನ್ಯಾಯಾಲಯದ ಮುಂದೆ ಹಾಜರಾಗುತ್ತಿದ್ದಾರೆ.