Monday, November 25, 2024
Homeರಾಷ್ಟ್ರೀಯ | Nationalದೆಹಲಿಯ ಐಎಎಸ್​ ತರಬೇತಿ​ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವು

ದೆಹಲಿಯ ಐಎಎಸ್​ ತರಬೇತಿ​ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವು

ನವದೆಹಲಿ,ಜು.28-ಕಳೆದ ರಾತ್ರಿ ದೆಹಲಿಯಲ್ಲಿ ಶನಿವಾರ ಸುರಿದ ಭಾರೀ ಮಳೆಗೆ ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌‍ ಅಕಾಡೆಮಿಯ ನೆಲಮಾಳಿಗೆ ನೀರು ತುಂಬಿಕೊಂಡು 3 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು,ಘಟನೆ ಕುರಿತು ಮ್ಯಾಜಿಸ್ಟ್ರೇಟ್‌ ತನಿಖೆಗೆ ದೆಹಲಿ ಸರ್ಕಾರ ಆದೇಶಿಸಿದೆ.

ನೆಲಮಾಳಿಗೆಯಲ್ಲಿ ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಮಾಹಿತಿ ಲಭಿಸಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭವಾದ ಕೆಲವೇ ಗಂಟೆಗಳ ಇಬ್ಬರು ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆಯಾಗಿ ಆತಂಕ ಶುರುವಾಯಿತು ನಂತರ ತಡ ರಾತ್ರಿ ಮತ್ತೊಬ್ಬ ವಿದ್ಯಾರ್ಥಿಯ ಶವ ಹೊರತೆಗೆಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಕಾನೂನು ಕ್ರಮಕ್ಕಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಡಿಸಿಪಿ ಹರ್ಷವರ್ಧನ್‌ ತಿಳಿಸಿದ್ದಾರೆ.ಒಟ್ಟು 5 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ದಾವಿಸಿ ಪಂಪ್‌ನಿಂದ ನೀರನ್ನು ಹೊರತೆಗೆಯಲಾಯಿತು ಮಳೆ ರಭಸಕ್ಕೆ ನೀರು ತುಂಬಾ ವೇಗವಾಗಿ ನೆಲಮಾಳಿಗೆ ತುಂಬಿದೆ, ಹೊರಬರಲು ಅವಕಾಶವಿರಲಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಅಲ್ಲಿ ಸುಮಾರು 30 ಜನರಿದ್ದರು ಅನೇಕರು ಹೊರಗೆ ಬಂದಿದ್ದಾರೆ ಆದರೆ ಮೂವರು ಒಳಗೆ ಸಿಲುಕಿದ್ದಾರೆ.ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದ ಎನ್‌ಡಿಆರ್‌ಎಫ್‌‍ ತಂಡಗಳು ಕೂಡ ಸ್ಥಳಕ್ಕೆ ಧಾವಿಸಿವೆ.ಸ್ವಾತಿ ಮಲಿವಾಲ್‌ ಕೂಡ ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಈ ಘಟನೆ ಅತ್ಯಂತ ದುಃಖಕರ ಮತ್ತು ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ. ಮಕ್ಕಳ ಕುಟುಂಬಕ್ಕೆ ಏನಾಗುತ್ತದೆ ಎಂದು ಊಹಿಸಲೂ ಸಾಧ್ಯವಿಲ್ಲ ಎಂದರು.

ಈ ಘಟನೆ ಹೇಗೆ ಸಂಭವಿಸಿತು ಎಂಬುದರ ಕುರಿತು ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶಿಸಲಾಗಿದೆ. ಈ ಘಟನೆಗೆ ಕಾರಣರಾದವರನ್ನು ಬಿಡುವುದಿಲ್ಲ ಅಲ್ಲದೇ ಈ ಘಟನೆಯ ಕುರಿತು ತನಿಖೆ ಆರಂಭಿಸಿ 24 ಗಂಟೆಯೊಳಗೆ ವರದಿ ಸಲ್ಲಿಸುವಂತೆ ಕಂದಾಯ ಸಚಿವ ಅತಿಶಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ,ಈ ನಡುವೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

RELATED ARTICLES

Latest News