ಟೋಕಿಯೊ, ಜು.28 (ಪಿಟಿಐ) ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಇಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಬಾಂಧವ್ಯಮತ್ತು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ವ್ಯಪಕ ಚರ್ಚೆ ನಡೆಸಿದರು.
ಟೋಕಿಯೊದಲ್ಲಿ ಕ್ವಾಡ್ ವಿದೇಶಾಂಗ ಸಚಿವರ ಸಭೆಯ ಹಿನ್ನೆಲೆಯಲ್ಲಿ ಉಭಯ ನಾಯಕರು ಭೇಟಿ ಮಹತ್ವ ಪಡೆದುಕೊಂಡಿದೆ. ಇಂದು ಟೋಕಿಯೊದಲ್ಲಿ ನಿಮನ್ನು ಭೇಟಿಯಾಗಲು ಉತ್ತಮವಾಗಿದೆ. ನಮ್ಮ ದ್ವಿಪಕ್ಷೀಯ ಕಾರ್ಯಸೂಚಿಯು ಸ್ಥಿರವಾಗಿ ಪ್ರಗತಿಯಲ್ಲಿದೆ. ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ವ್ಯಾಪಕವಾದ ಚರ್ಚೆಯನ್ನು ನಡೆಸಿದೆ.
ನಾಳೆ ಕ್ವಾಡ್ ಗೆ ಹಾಜರಾಗಲು ಎದುರು ೋಡಬಹುದು ಎಂದು ಜೈಶಂಕರ್ ಎಕ್‌್ಸನಲ್ಲಿ ಪೋಸ್ಟ್ ಮಾಡಿದ್ದಾರೆ. ನವೆಂಬರ್ 2017 ರಲ್ಲಿ, ಭಾರತ, ಜಪಾನ್, ಯುಎಸ್ ಮತ್ತು ಆಸ್ಟ್ರೇಲಿಯಾಗಳು ಇಂಡೋ-ಪೆಸಿಫಿಕ್‌ನಲ್ಲಿನ ನಿರ್ಣಾಯಕ ಸಮುದ್ರ ಮಾರ್ಗಗಳನ್ನು ಯಾವುದೇ ಪ್ರಭಾವದಿಂದ ಮುಕ್ತವಾಗಿಡಲು ಹೊಸ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಲು ಕ್ವಾಡ್ ಅನ್ನು ಸ್ಥಾಪಿಸುವ ದೀರ್ಘಾವಧಿಯ ಪ್ರಸ್ತಾಪಕ್ಕೆ ರೂಪು ನೀಡಿತು.
ದಕ್ಷಿಣ ಚೀನಾ ಸಮುದ್ರವು ಪೆಸಿಫಿಕ್ ಮತ್ತು ಹಿಂದೂ ಮಹಾಸಾಗರಗಳ ನಡುವಿನ ಜಂಕ್ಷನ್‌ನಲ್ಲಿದೆ. ದಕ್ಷಿಣ ಚೀನಾ ಸಮುದ್ರದ ಬಹುಭಾಗವನ್ನು ಚೀನಾ ತನ್ನದೆಂದು ಹೇಳಿಕೊಂಡರೆ, ಫಿಲಿಪೈನ್‌್ಸ, ವಿಯೆಟ್ನಾಂ, ಮಲೇಷ್ಯಾ, ಬ್ರೂನಿ ಮತ್ತು ತೈವಾನ್ ಕಡಲ ಪ್ರದೇಶದ ಮೇಲೆ ಪ್ರತಿವಾದ ಸಾಧಿಸುತ್ತಿದ್ದು ಇದನ್ನು ನಿಯಂತ್ರಿಸಲು ಈ ಸಬೆ ಮಹತ್ವ ಪಡೆದಿದೆ. .