Friday, September 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-07-2024)

ನಿತ್ಯ ನೀತಿ : ಯಾವ ವ್ಯಕ್ತಿಗೆ ದುರಾಸೆ ಇಲ್ಲವೋ ಅವನನ್ನು ಗುಲಾಮನನ್ನಾಗಿ ಮಾಡಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ.

ಪಂಚಾಂಗ : ಮಂಗಳವಾರ , 30-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ
ತಿಥಿ: ದಶಮಿ / ನಕ್ಷತ್ರ: ಕೃತ್ತಿಕಾ / ಯೋಗ: ವೃದ್ಧಿ / ಕರಣ: ಭವ

ಸೂರ್ಯೋದಯ – ಬೆ.06.05
ಸೂರ್ಯಾಸ್ತ – 06.47
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :
ಮೇಷ
: ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.
ವೃಷಭ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಮಿಥುನ: ಕೆಟ್ಟ ಅಭ್ಯಾಸವೊಂದನ್ನು ಬಿಡದ ನಿಮಗೆ ಸಾರ್ವಜನಿಕರಿಂದ ಅವಮಾನವಾಗಲಿದೆ.

ಕಟಕ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಸಿಂಹ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಕನ್ಯಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಹಣಕಾಸಿನ ಸಂಸ್ಥೆಯವರಿಗೆ ಆಧಿಕ ಒತ್ತಡ.

ತುಲಾ: ನಿಮ್ಮ ಮಾತೇ ಸರಿ ಎಂಬ ಹಠ ಬಿಟ್ಟು ವಿಶಾಲವಾಗ ಚಿಂತನೆ ಮಾಡುವುದು ಒಳಿತು.
ವೃಶ್ಚಿಕ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಧನುಸ್ಸು: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಮೀನ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.

RELATED ARTICLES

Latest News