Friday, November 22, 2024
Homeರಾಜಕೀಯ | Politicsದೋಸ್ತಿಗಳ ವಿರುದ್ಧವೇ ರೊಚ್ಚಿಗೆದ್ದ ಕೇಂದ್ರ ಸಚಿವ ಕುಮಾರಸ್ವಾಮಿ

ದೋಸ್ತಿಗಳ ವಿರುದ್ಧವೇ ರೊಚ್ಚಿಗೆದ್ದ ಕೇಂದ್ರ ಸಚಿವ ಕುಮಾರಸ್ವಾಮಿ

ನವದೆಹಲಿ,ಜು.31- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ ನಡೆಸಲಿರುವ ಪಾದಯಾತ್ರೆ ವಿಚಾರದಲ್ಲಿ ಸರಿಯಾದ ರೀತಿ ನಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮೇಲೆ ನಾವು ಏಕೆ ಬೆಂಬಲ ಕೊಡಬೇಕೆಂದು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಕಾರ್ಯಕ್ರಮದ ಮುಖ್ಯಸ್ಥರಾಗಿ ಮಾಜಿ ಶಾಸಕ ಪ್ರೀತಂ ಗೌಡರನ್ನು ಬಿಂಬಿಸಲಾಗುತ್ತಿದೆ. ಆ ಪ್ರೀತಂಗೌಡ ಯಾರು? ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ಸರ್ವನಾಶ ಮಾಡಲು ಹೊರಟವರನ್ನು ಸಭೆಗೆ ಕರೆದು ಕೂರಿಸುತ್ತಾರೆ. ನನ್ನನ್ನು ಆಹ್ವಾನಿಸುತ್ತಾರೆ. ನನಗೂ ಸಹಿಸಿಕೊಳ್ಳಲು ಇತಿಮಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಸನದ ಬೀದಿಯಲ್ಲಿ ಪೆನ್‌ಡ್ರೈವ್‌ ಹಂಚಲು ಯಾರು ಕಾರಣ. ಅಂಥವರನ್ನು ಜೊತೆಯಲ್ಲಿ ಕೂರಿಸಿಕೊಂಡು ನಮನ್ನು ಸಭೆಗೆ ಕರೆಯುತ್ತಾರೆ. ನಮ ಕುಟುಂಬಕ್ಕೆ ವಿಷ ಹಾಕಿದವರನ್ನು ಸಭೆಗೆ ಕೂರಿಸಿಕೊಳ್ಳುತ್ತಾರೆ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಿಂದ ಮೈಸೂರಿನವರೆಗೆ ನಮ ಶಕ್ತಿ ಪ್ರಬಲವಾಗಿದೆ. ರಾಜಕಾರಣವೇ ಬೇರೆ, ಚುನಾವಣೆ ಬಂದಾಗ ಒಟ್ಟಿಗೆ ಹೋಗುವುದು ಬೇರೆ. ಆದರೆ ಇಂತಹ ಹೋರಾಟದ ವಿಚಾರದಲ್ಲಿ ವಿಶ್ವಾಸಕ್ಕೆ ಪಡೆಯದಿರುವುದು ಮನಸ್ಸಿಗೆ ತುಂಬ ನೋವಾಗಿದೆ ಎಂದಿದ್ದಾರೆ.

https://www.youtube.com/watch?v=R__ffrxYWWU

ಬಿಜೆಪಿಯವರು ಪಾದಯಾತ್ರೆ ಮಾಡಬೇಕೆಂಬ ನಿರ್ಧಾರ ಮಾಡಿದ್ದಾರೆ. ನಮಗೆ ಮಾಹಿತಿಗಾಗಿ ಹೇಳಿದ್ದಾರೆ ಅಷ್ಟೇ. ಬಿಜೆಪಿ ನಿಲುವಿನಲ್ಲಿ ತೀರ್ಮಾನ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಆದರೆ ನಾವು ಪಾದಯಾತ್ರೆಗೆ ಸೂಕ್ತ ಸಂದರ್ಭವಲ್ಲ ಎಂದು ಹಿಂದೆ ಸರಿದಿದ್ದೇವೆ. ನಮಗೆ ಜನರ ಸಮಸ್ಯೆ ಬಗೆಹರಿಸುವುದು ಮುಖ್ಯ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ ಜನರು ತತ್ತರಿಸಿ ಹೋಗಿದ್ದಾರೆ. ಒಂದು ಕುಟುಂಬವನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡುವುದು ಬೇಡ. ಈ ಸಂದರ್ಭದಲ್ಲಿ ಜನರ ನೋವಿಗೆ ಅವರ ಭಾವನೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ಕೇವಲ ರಾಜಕೀಯವೇ ಮುಖ್ಯವಲ್ಲ.

ಉತ್ತರ ಕರ್ನಾಟಕದ ನೂರಾರು ಗ್ರಾಮಗಳು ಜಲಾವೃತ್ತವಾಗಿದೆ. ಹಲವು ಕುಟುಂಬಗಳು ಬೀದಿಗೆ ಬಂದಿವೆ. ಇಂತಹ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ. ಹೀಗಾಗಿ ನಿನ್ನೆ ಕೋರ್‌ ಕಮಿಟಿ ಸಭೆಯಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ನಿರ್ಧಾರ ತೆಗೆದುಕೊಂಡಿದ್ದಾರೆ. ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದರು.

ಕೇರಳದಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಗುಡ್ಡ ಕುಸಿತದಲ್ಲಿ ಕರ್ನಾಟಕದಿಂದ ಹೋದವರು ಕಣರೆಯಾಗಿದ್ದಾರೆ. ವಾಪಸ್‌‍ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಹಲವೆಡೆ ರೆಡ್‌, ಎಲ್ಲೋ ಅಲರ್ಟ್‌ ಘೋಷಣೆಯಾಗಿದೆ. ಹಲವು ಜಿಲ್ಲೆಗಳು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಂಡ್ಯ ಭಾಗದಲ್ಲಿ ಭತ್ತದ ಸಸಿ ನಾಟಿ ಮಾಡುವ ಕೆಲಸ ಶುರುವಾಗಲಿದೆ. ಈ ಹಿನ್ನಲೆಯಲ್ಲಿ ಪಾದಯಾತ್ರೆ ಮುಂದೂಡುವ ನಿರ್ಧಾರಕ್ಕೆ ಬಂದಿದ್ದಾರೆ.

RELATED ARTICLES

Latest News