ಬೆಂಗಳೂರು,ಜು.31- ಪೂರ್ವ ವಿಭಾಗದ ಸಂಚಾರ ಪೊಲೀಸರು ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ ವಾಹನ ಸವಾರರು ಮತ್ತು ಚಾಲಕರ ವಿರುದ್ಧ 1100ಕ್ಕಿಂತಲೂ ಹೆಚ್ಚು ಪ್ರಕರಣ ದಾಖಲು ಮಾಡಿಕೊಂಡು 5.61 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.
ಟ್ರಾಫಿಕ್ ಸಿಗ್ನಲ್ ಜಂಪ್, ರಾಂಗ್ ಪಾರ್ಕಿಂಗ್, ಏಕಮುಖ ಸಂಚಾರವಿದ್ದರೂ ವಿರುದ್ಧ ದಿಕ್ಕಿನಲ್ಲಿ ಸಂಚಾರ, ಫುಟ್ಪಾತ್ ಪಾರ್ಕಿಂಗ್, ಗ್ರಾಹಕರಿಂದ ಹೆಚ್ಚು ಹಣ ವಸೂಲಿ, ಸೀಟ್ ಬೆಲ್್ಟ ಹಾಕದಿರುವುದು, ಅಗತ್ಯಕ್ಕಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಬಸ್ನಲ್ಲಿ ಕರೆದೊಯ್ಯುವುದು, ಸವಾರ ಹಿಂಬದಿ ಸವಾರ ಹೆಲೆಟ್ ಧರಿಸದಿರುವುದು ಸೇರಿದಂತೆ ವಿವಿಧ ಸಂಚಾರ ನಿಯಮಗಳನ್ನು ಉಲ್ಲಂಘೀಸಿದ ವಾಹನ ಸವಾರರು ಮತ್ತು ಚಾಲುಕರುಗಳ ವಿರುದ್ಧ ನಿನ್ನೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಇದೇ ವೇಳೆ ಸಂಚಾರ ನಿಯಮಗಳನ್ನು ಉಲ್ಲಂಘಿಸದೆ ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.
ಮುಂದಿನ ದಿನಗಳಲ್ಲಿಯೂ ಸಹ ವಿಶೇಷ ಕಾರ್ಯಾಚರಣೆಯನ್ನು ಮುಂದುವರೆಸಲಾಗುವುದು ಎಂದು ಪೂರ್ವ ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತರಾದ ಕುಲದೀಪ್ಕುಮಾರ್ ಆರ್.ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.