ಶಿಮ್ಲಾ, ಆ.1- ರಾಜ್ಯದ ರಾಂಪುರ ಉಪ ವಿಭಾಗದ ಝಖಾರಿ ಪ್ರದೇಶದಲ್ಲಿ ಇಂದು ಮುಂಜಾನೆ ಮೇಘಸ್ಫೋಟದ ನಂತರ 30 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.
ರಸ್ತೆಗಳು ಕೊಚ್ಚಿಹೋಗಿವೆ ಮತ್ತು ಈ ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆಗೂ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್, ಪೊಲೀಸರು ಮತ್ತು ಗೃಹರಕ್ಷಕ ದಳದ ತಂಡಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.
ನಾಪತ್ತೆಯಾದವರ ಪತ್ತೆಗೆ ಡ್ರೋನ್‌ಗಳನ್ನು ಸಹ ಬಳಸಲಾಗುತ್ತಿದೆ ಎಂದು ಅವರು ಹೇಳಿದರು. ಜನವಸತಿ ಪ್ರದೇಶದ ಹಲವು ಮನೆಗಳ ದಿಡೀರ್ ಪ್ರವಾಹದಿಮದ ಕೊಚ್ಚಿ ಹೋಗಿದೆ.