ಬೆಂಗಳೂರು,ಅ.20- ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈಕೊಡವಿ ಎದ್ದು ನಿಂತಿರುವ ಪ್ರತಿಪಕ್ಷ ಬಿಜೆಪಿ ತನ್ನ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಎಟಿಎಂ ಸರ್ಕಾರದ ವಿರುದ್ಧ ಕಲೆಕ್ಷನ್ ವಂಶಾವಳಿ ಎಂಬ ಪೋಸ್ಟರ್ ಬಿಡುಗಡೆ ಮಾಡಿದೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಡಿ.ವಿ.ಸದಾನಂದಗೌಡ, ಶಾಸಕ ಎಲ್.ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣ ಸ್ವಾಮಿ ಅವರು ಪೋಸ್ಟರ್‍ಗಳನ್ನು ಬಿಡುಗಡೆ ಮಾಡಿದರು.
ಕನ್ನಡ ಹಾಗೂ ಇಂಗ್ಲಿಷ್‍ನಲ್ಲಿರುವ ಈ ಎರಡು ಪೋಸ್ಟರ್‍ಗಳಿಗೆ ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ಎಂದು ಶೀರ್ಷಿಕೆ ನೀಡಲಾಗಿದೆ. ಇತ್ತೀಚೆಗೆ ಉದ್ಯಮಿ ಅಂಬಿಕಾಪತಿ ಮನೆಯ ಮಂಚದ ಕೆಳಗೆ ಬಾಕ್ಸ್‍ನಲ್ಲಿ ಸಿಕ್ಕ 500 ಮುಖಬೆಲೆಯ ನೋಟುಗಳನ್ನು ಪ್ರದರ್ಶಿಸಲಾಗಿದೆ.
ಸಿಲಿಂಡರ್‌ಗೆ ಬೆಂಕಿ ತಗುಲಿ ಒಂದೇ ಕುಟುಂಬದ ಮೂವರು ಸಾವು
ಮೇಲ್ಭಾಗದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಲಭಾಗದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಡಭಾಗದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಧ್ಯಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಭಾಗದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಳಭಾಗದಲ್ಲಿ ಡಾ.ಯತೀಂದ್ರ, ಸಚಿವ ಭೈರತಿ ಸುರೇಶ್, ಅಂಬಿಕಾಪತಿ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಪ್ರದೀಪ್, ಪ್ರಮೋದ್, ಪ್ರಹ್ಲಾದ್, ಅವರ ಭಾವಚಿತ್ರಗಳನ್ನು ಹಾಕಲಾಗಿದೆ.
ರಾಮಯ್ಯ ಮತ್ತು ಕೆಂಪಣ್ಣ ಅವರನ್ನು ಕಾಂಗ್ರೆಸ್ ಸರ್ಕಾರದ ಕಲೆಕ್ಷನ್ ಏಜೆಂಟ್‍ಗಳೆಂದು ಆರೋಪಿಸಿರುವ ಬಿಜೆಪಿ ಮತ್ತೊಂದು ಚಿತ್ರದಲ್ಲಿ ಪ್ರದೀಪ್, ಪ್ರಮೋದ್, ಪ್ರಹ್ಲಾದ್ ಅವರುಗಳನ್ನು ಕಲೆಕ್ಷನ್ ಏಜೆಂಟ್ ಜೊತೆಗೆ ಕಾಂಗ್ರೆಸ್ ಪಕ್ಷ ಲೂಟಿ ಕಂಪನಿ ಎಂದು ಆರೋಪಿಸಿದೆ.