ನಿತ್ಯ ನೀತಿ : ಕಷ್ಟಗಳನ್ನು ಭೇಟಿಯಾದಾಗ ತಾಳೆಗೆ ದಾರಿ ಸಿಗುತ್ತದೆ. ಅನುಮಾನಗಳನ್ನು ಭೇಟಿಯಾದಾಗ ನಿರ್ಣಯಗಳಿಗೆ ದಾರಿ ಸಿಗುತ್ತದೆ. ಹಸಿವನ್ನು ಭೇಟಿಯಾದಾಗ ಅನ್ನದ ಬೆಲೆ ಗೊತ್ತಾಗುತ್ತದೆ. ಸೋಲನ್ನು ಭೇಟಿಯಾದಾಗ ಗೆಲುವಿನ ದಾರಿ ಸಿಗುತ್ತದೆ.
ಪಂಚಾಂಗ : ಭಾನುವಾರ, 04-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ /ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಪುಷ್ಯ / ಯೋಗ: ಸಿದ್ಧಿ / ಕರಣ: ಕಿಂಸ್ತುಘ್ನ
ಸೂರ್ಯೋದಯ – ಬೆ.06.06
ಸೂರ್ಯಾಸ್ತ – 06.46
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ
ಮೇಷ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ವೃಷಭ: ಪಿತ್ರಾರ್ಜಿತ ಆಸ್ತಿ ವಿಷಯಗಳಿಂದ ತೊಂದರೆ ಎದುರಿಸಬೇಕಾಗುತ್ತದೆ.
ಮಿಥುನ: ಸಾಲದ ಚಿಂತೆ ಕಾಡಲಿದೆ. ಪಾಲುದಾರಿಕೆಯಲ್ಲಿ ಸಮಸ್ಯೆ ಉಂಟಾಗಲಿದೆ.
ಕಟಕ: ತಂದೆಯವರ ಕಠಿಣ ನಡವಳಿಕೆ ನಿಮಗೆ ಸಿಟ್ಟು ಬರಿಸುತ್ತದೆ. ಶಾಂತವಾಗಿರುವುದು ಒಳಿತು.
ಸಿಂಹ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ ಯಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ನಿಮ್ಮ ಜನಪ್ರಿಯತೆ ಉತ್ತುಂಗದಲ್ಲಿರುತ್ತದೆ ಮತ್ತು ಇತರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವಿರಿ.
ತುಲಾ: ಹೊಸ ವ್ಯವಹಾರ ಪ್ರಾರಂಭಿಸಿಲು ಉತ್ತಮ ದಿನ.
ವೃಶ್ಚಿಕ: ದಿನಸಿ ವ್ಯಾಪಾರಿಗಳಿಗೆ ಅಧಿಕ ಲಾಭ ಸಿಗಲಿದೆ.
ಧನುಸ್ಸು: ಕೌಟುಂಬಿಕ ಮತ್ತು ವೈವಾಹಿಕ ಜೀವನ ಬಹಳ ಆಹ್ಲಾದಕರವಾಗಿರುತ್ತದೆ.
ಮಕರ: ಕೆಟ್ಟ ಆಲೋಚನೆ ಮಾಡುವುದನ್ನು ತಪ್ಪಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕುಂಭ: ಸ್ನೇಹಿತರ ನೇರ ಮಾತುಗಳಿಂದ ಅವಮಾನ ಎದುರಿಸಬೇಕಾಗುತ್ತದೆ. ಹಣಕಾಸಿನ ತೊಂದರೆ.
ಮೀನ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಧಿಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.