Friday, September 20, 2024
Homeರಾಜಕೀಯ | Politicsನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ : ಓಪನ್ ಚಾಲೆಂಜ್

ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ : ಓಪನ್ ಚಾಲೆಂಜ್

ಬೆಂಗಳೂರು, ಆ.4- ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದೆ. ಯಾರಿಗೂ ಮೋಸ ಮಾಡಲಿಲ್ಲ. ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಜೆಡಿಎಸ್‌‍ ರಾಜಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

ಬಿಡದಿಯಲ್ಲಿ ಎರಡನೇ ದಿನದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಮುಂಚೆಯೇ 45 ಎಕರೆ ಜಮೀನು ತೆಗೆದುಕೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ ಎಂದಿದ್ದಾರೆ.

ಆದರೆ, ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇಂಥವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಹೆಣ್ಣು ಮಗಳೊಬ್ಬಳನ್ನು ಕಿಡ್ನಾಪ್‌ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ಸೈಟು ಬರೆಸಿಕೊಂಡಿದ್ದಾರೆ. ಅದೇನೋ ಬಿಚ್ಚಿಡುತ್ತೇನೆ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ. ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಬಿಚ್ಚೋಕ್ಕೆ ಹೋದರೆ ನಿಮದು ಪುಟ ಗಟ್ಟಲೆ ಇದೆ.ಅಜ್ಜಯ್ಯನ ಬಗ್ಗೆ ಶಿವಕುಮಾರ್‌ ಗೆ ಭಕ್ತಿ, ಗೌರವವಿದ್ದರೆ ಪ್ರಾಮಾಣಿಕವಾಗಿ ಬೆಳೆದು ಬಂದರಾ ಎಂದು ಪ್ರಮಾಣ ಮಾಡಲಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿರಿ ಎಂಬುದು ಗೊತ್ತಿದೆ. ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನನ್ನು ಬೆಳೆಸಿದೆ. ನಾನು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ಈಗ ಬಿಜೆಪಿ, ಜೆಡಿಎಸ್‌‍ ಮೈತ್ರಿ ಕಾಂಗ್ರೆಸ್‌‍ ನಿದ್ದೆಗೆಡಿಸಿದೆ. ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೆಯದಾಗಬೇಕು. ನಾನು ಅಧಿಕಾರ ಕೇಳಿ ನಿಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದವರು ಎಂದು ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ.

ಸಂಸದ ಡಾಕ್ಟರ್‌ ಮಂಜುನಾಥ್‌ ಅವರು ವೈದ್ಯರ ಕೆಲಸ ಮಾತ್ರ ಮಾಡುತ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರೀತಿದೆ. ಅವರ ಬಗ್ಗೆನೂ ಶಿವಕುಮಾರ್‌ ಮಾತಾಡಿದ್ದಾರೆ ಎಂದು ಹೇಳಿದ್ದಾರೆ.ಈ ಪಾದಯಾತ್ರೆಯನ್ನು ಅಸೂಯೆಯಿಂದ ಹಮಿಕೊಂಡಿದ್ದಲ್ಲ. ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅಂದುಕೊಂಡಿದ್ದಾರೆ.

ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುವ ಕಾಂಗ್ರೆಸಿಗರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಎಂದು ಟೀಕಿಸಿದ್ದಾರೆ.
ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತಾಡಿದ್ದಾರೆ. ಮೈಸೂರು ನಗರದ ಉಸ್ತುವಾರಿಯನ್ನು ಮುಖ್ಯಮಂತ್ರಿಯವರೇ ವಹಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ತಮ ಪತ್ನಿ ಹೆಸರಲ್ಲಿ 15 ನಿವೇಶನ ಪಡೆಯಲು ನಮ ವಿರೋಧವಿಲ್ಲ.ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು, ನಕಲಿ ದಾಖಲೆ ಸೃಷ್ಟಿ ಸಿ15 ನಿವೇಶನಗಳನ್ನು ಪಡೆದಿದ್ದಾರೆ. ಕಾನೂನು ಬಾಹಿರವಾಗಿ ತೆಗೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಸ್ತಿ ಲಪಟಾಯಿಸಿದ್ದಾರೆ. ಇದರ ದಾಖಲೆ ಸದನದಲ್ಲಿ ಇಟ್ಟಿದ್ದೇವೆ. ಆದರೆ, ಉತ್ತರ ಕೊಡದೇ ಕಾಂಗ್ರೆಸ್‌‍ ನಾಯಕರು ಪಲಾಯನ ಮಾಡಿದ್ದಾರೆ. ಯಾರಿಗಾದರೂ ತಾಕತ್‌ ಇದ್ರೆ, ಗಟ್ಟಿ ಧ್ವನಿ ಇದ್ದರೆ ಅದು ಕುಮಾರಸ್ವಾಮಿಗೆ ಎಂದು ಡಿಸಿಎಂ ಹೇಳಿದ್ದಾರೆ.

ಡಿಸಿಎಂ ಅವರು ಏನು ಪ್ರಶ್ನೆ ಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ,ನಿಮಗಿಂತಲೂ ಏಕವಚನದಲ್ಲಿ ಮಾತಾಡಲು ನಮಗೂ ಗೊತ್ತು. ಆದರೆ ಆ ಕೆಳಮಟ್ಟಕ್ಕೆ ನಾವು ಇಳಿಯಲ್ಲ ಎಂದಿದ್ದಾರೆ. ಬೆಂಗಳೂರು, ಆ.4- ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದೆ. ಯಾರಿಗೂ ಮೋಸ ಮಾಡಲಿಲ್ಲ. ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಜೆಡಿಎಸ್‌‍ ರಾಜಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

ಬಿಡದಿಯಲ್ಲಿ ಎರಡನೇ ದಿನದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಮುಂಚೆಯೇ 45 ಎಕರೆ ಜಮೀನು ತೆಗೆದುಕೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ ಎಂದಿದ್ದಾರೆ. ಆದರೆ, ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ.

ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇಂಥವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಹೆಣ್ಣು ಮಗಳೊಬ್ಬಳನ್ನು ಕಿಡ್ನಾಪ್‌ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ಸೈಟು ಬರೆಸಿಕೊಂಡಿದ್ದಾರೆ.

ಅದೇನೋ ಬಿಚ್ಚಿಡುತ್ತೇನೆ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ. ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಬಿಚ್ಚೋಕ್ಕೆ ಹೋದರೆ ನಿಮದು ಪುಟ ಗಟ್ಟಲೆ ಇದೆ.ಅಜ್ಜಯ್ಯನ ಬಗ್ಗೆ ಶಿವಕುಮಾರ್‌ ಗೆ ಭಕ್ತಿ, ಗೌರವವಿದ್ದರೆ ಪ್ರಾಮಾಣಿಕವಾಗಿ ಬೆಳೆದು ಬಂದರಾ ಎಂದು ಪ್ರಮಾಣ ಮಾಡಲಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿರಿ ಎಂಬುದು ಗೊತ್ತಿದೆ. ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನನ್ನು ಬೆಳೆಸಿದೆ. ನಾನು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ಈಗ ಬಿಜೆಪಿ, ಜೆಡಿಎಸ್‌‍ ಮೈತ್ರಿ ಕಾಂಗ್ರೆಸ್‌‍ ನಿದ್ದೆಗೆಡಿಸಿದೆ. ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೆಯದಾಗಬೇಕು. ನಾನು ಅಧಿಕಾರ ಕೇಳಿ ನಿಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದವರು ಎಂದು ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ.

ಸಂಸದ ಡಾಕ್ಟರ್‌ ಮಂಜುನಾಥ್‌ ಅವರು ವೈದ್ಯರ ಕೆಲಸ ಮಾತ್ರ ಮಾಡುತ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರೀತಿದೆ. ಅವರ ಬಗ್ಗೆನೂ ಶಿವಕುಮಾರ್‌ ಮಾತಾಡಿದ್ದಾರೆ ಎಂದು ಹೇಳಿದ್ದಾರೆ.ಈ ಪಾದಯಾತ್ರೆಯನ್ನು ಅಸೂಯೆಯಿಂದ ಹಮಿಕೊಂಡಿದ್ದಲ್ಲ. ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅಂದುಕೊಂಡಿದ್ದಾರೆ.

ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುವ ಕಾಂಗ್ರೆಸಿಗರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಎಂದು ಟೀಕಿಸಿದ್ದಾರೆ.
ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತಾಡಿದ್ದಾರೆ. ಮೈಸೂರು ನಗರದ ಉಸ್ತುವಾರಿಯನ್ನು ಮುಖ್ಯಮಂತ್ರಿಯವರೇ ವಹಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ತಮ ಪತ್ನಿ ಹೆಸರಲ್ಲಿ 15 ನಿವೇಶನ ಪಡೆಯಲು ನಮ ವಿರೋಧವಿಲ್ಲ.ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು, ನಕಲಿ ದಾಖಲೆ ಸೃಷ್ಟಿ ಸಿ15 ನಿವೇಶನಗಳನ್ನು ಪಡೆದಿದ್ದಾರೆ. ಕಾನೂನು ಬಾಹಿರವಾಗಿ ತೆಗೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಸ್ತಿ ಲಪಟಾಯಿಸಿದ್ದಾರೆ. ಇದರ ದಾಖಲೆ ಸದನದಲ್ಲಿ ಇಟ್ಟಿದ್ದೇವೆ. ಆದರೆ, ಉತ್ತರ ಕೊಡದೇ ಕಾಂಗ್ರೆಸ್‌‍ ನಾಯಕರು ಪಲಾಯನ ಮಾಡಿದ್ದಾರೆ. ಯಾರಿಗಾದರೂ ತಾಕತ್‌ ಇದ್ರೆ, ಗಟ್ಟಿ ಧ್ವನಿ ಇದ್ದರೆ ಅದು ಕುಮಾರಸ್ವಾಮಿಗೆ ಎಂದು ಡಿಸಿಎಂ ಹೇಳಿದ್ದಾರೆ.

ಡಿಸಿಎಂ ಅವರು ಏನು ಪ್ರಶ್ನೆ ಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ,ನಿಮಗಿಂತಲೂ ಏಕವಚನದಲ್ಲಿ ಮಾತಾಡಲು ನಮಗೂ ಗೊತ್ತು. ಆದರೆ ಆ ಕೆಳಮಟ್ಟಕ್ಕೆ ನಾವು ಇಳಿಯಲ್ಲ ಎಂದಿದ್ದಾರೆ.

RELATED ARTICLES

Latest News