Friday, September 20, 2024
Homeರಾಜ್ಯ3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್‌‍ 'ಮೈಸೂರು ಚಲೋ' ಪಾದಯಾತ್ರೆ

3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್‌‍ ‘ಮೈಸೂರು ಚಲೋ’ ಪಾದಯಾತ್ರೆ

ಬೆಂಗಳೂರು,ಆ.5- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾದಲ್ಲಿ) ಅಕ್ರಮ ನಿವೇಶನ ಹಂಚಿಕೆಗೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಶನಿವಾರ ಕೆಂಗೇರಿಯಿಂದ ಆರಂಭವಾದ ಪಾದಯಾತ್ರೆ ಭಾನುವಾರ ಕೆಂಗಲ್‌ನಲ್ಲಿ ಕೊನೆಗೊಂಡಿತ್ತು. ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್‌ ಹನುಮಂತಯ್ಯ ಅವರ ಹುಟ್ಟೂರು ಕೆಂಗಲ್‌ನಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೂರನೇ ದಿನದ ಪಾದಯಾತ್ರೆಗೆ ಚಾಲನೆ ಕೊಡಲಾಯಿತು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೆಂಗಲ್‌ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್‌‍ನ ಪ್ರಮುಖರು ಹಾಜರಿದ್ದರು.ಬಳಿಕ ಕೆಂಗಲ್‌ನಿಂದ ಪ್ರಾರಂಭವಾದ ಪಾದಯಾತ್ರೆಯು ಸುಮಾರು 16 ಕಿ.ಮೀ. ಶ್ರಮಿಸಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ನಿಡಘಟ್ಟದಲ್ಲಿ ಮುಕ್ತಾಯಗೊಂಡಿತು.

ಮೂರನೇ ದಿನವಾದ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ಮತ್ತು ಜೆಡಿಎಸ್‌‍ನ ಹಲವು ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

ಬಿಜೆಪಿ ಹಾಗೂ ಜೆಡಿಎಸ್‌‍ನ ಬಾವುಟಗಳನ್ನು ಹಿಡಿದುಕೊಂಡು ಜೈಕಾರಗಳನ್ನು ಕೂಗಿ ಉತ್ಸಾಹದಿಂದಲೇ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಿದ್ದ ಉಭಯಪಕ್ಷಗಳ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕೆಂದು ಆಗ್ರಹಿಸಿದರು.

ಪಾದಯಾತ್ರೆಗೆ ಮೂರನೇ ದಿನ ಉಭಯ ಪಕ್ಷಗಳಲ್ಲಿ ಸಣ್ಣಪುಟ್ಟ ಗೊಂದಲಗಳು ನಿವಾರಣೆಯಾಗುತ್ತಿದ್ದು, ದಿನದಿಂದ ದಿನಕ್ಕೆ ಕಾರ್ಯಕರ್ತರ ಪಾಲ್ಗೊಳ್ಳುವಿಕೆಯು ಹೆಚ್ಚಾಗುತ್ತಲೇ ಇದೆ.

ಜೆಡಿಎಸ್‌‍ ಪ್ರಬಲವಾಗಿರುವ ಕಡೆ ತಮ ಅಸ್ತಿತ್ವವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜೆಡಿಎಸ್‌‍ ಪ್ರತ್ಯೇಕವಾಗಿ ನಡೆಯುವ ತಂತ್ರಗಾರಿಕೆಯನ್ನು ಪ್ರಯೋಗ ಮಾಡಿತ್ತು. ಆದರೆ, ಇದು ದೋಸ್ತಿಗಳಲ್ಲಿ ಒಡಕಿನ ಸಂದೇಶ ಕೊಡುತ್ತಿರುವ ಹಿನ್ನೆಲೆಯಲ್ಲಿ ಮೂರನೇ ದಿನ ಜೊತೆಯಾಗಿಯೇ ಬಿಜೆಪಿ ಮತ್ತು ಜೆಡಿಎಸ್‌‍ ಕಾರ್ಯಕರ್ತರು ಹೆಜ್ಜೆ ಹಾಕಿದರು.

ಪಾದಯಾತ್ರೆ ಆರಂಭದಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಮನಗರದಲ್ಲಿ ಪಾದಯಾತ್ರೆ ಅಂತ್ಯಗೊಂಡ ಬಳಿಕ ನಡೆಯಲಿರುವ ಕಾರ್ಯಕ್ರಮದಲ್ಲೂ ಡಿಕೆಶಿ ವಿರುದ್ಧ ಕಿಡಿಕಾರುವ ಸಂಭವವಿದೆ.

ಎಚ್‌ಡಿಕೆ ವಿರುದ್ಧ ಏಕ ವಚನದಲ್ಲೇ ವಾಗ್ದಾಳಿ ನಡೆಸಿದ್ದ ಡಿಕೆಶಿಗೆ ರಾಮನಗರದಲ್ಲಿ ಮತ್ತಷ್ಟು ಉತ್ತರ ಕೊಡುವುದಾಗಿ ಎಚ್‌ಡಿಕೆ ಎಚ್ಚರಿಕೆ ನೀಡಿದ್ದರು. ಜಿಲ್ಲೆಯ ಹೆಸರು ಬದಲಾವಣೆ ವಿಚಾರವಾಗಿ ರಾಮನಗರದಲ್ಲೇ ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಲಿದ್ದಾರೆ. ಬಿಡದಿಯಲ್ಲಿ ಅವರು ಡಿ.ಕೆ.ಶಿವಕುಮಾರ್‌ ಅವರು ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಆರೋಪಿಸಿದ್ದರು. ಬಿಡದಿಯಲ್ಲಿ ಡಿ.ಕೆ.ಶಿವಕುಮಾರ್‌ ಅವರು ಕಟ್ಟಿರುವ ನರ್ಸಿಂಗ್‌ ಕಾಲೇಜು ಒಬ್ಬ ಬಡ ಬ್ರಾಹಣನಿಗೆ ಸೇರಿದ್ದು ಎಂದು ಆರೋಪಿಸಿದ್ದರು. ಸದಾಶಿವ ನಗರದಲ್ಲಿ ವಿಧವೆ ಮಹಿಳೆಯರ ಜಮೀನು ತಮ ಮಗಳ ಹೆಸರಿಗೆ ಬರೆಸಿದ್ದಾರೆ ಎಂದು ದೂರಿದ್ದರು.

ಮೊದಲ ದಿನದ ಪಾದಯಾತ್ರೆಯಲ್ಲಿ ಅಂತರ ಕಾಯ್ದುಕೊಂಡಿದ್ದ ಜೆಡಿಎಸ್‌‍ ಮುಖಂಡ ನಿಖಿಲ್‌ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜೇಯೇಂದ್ರ ಅವರು ಭಾನುವಾರ ಒಟ್ಟಿಗೆ ಹೆಜ್ಜೆ ಹಾಕಿದರು. ದಾರಿಯುದ್ದಕ್ಕೂ ಹೂವಿನ ಹಾರ, ತೂರಾಯಿಗಳಿಂದಲೇ ತುಂಬಿ ಹೋಗಿದ್ದ ಇಬ್ಬರು ನಾಯಕರುಗಳೊಟ್ಟಿಗೆ ಬಿಜೆಪಿ-ಜೆಡಿಎಸ್ನ ಶಾಸಕರು, ಎಂಎಲ್ಸಿಗಳು ನಡಿಗೆ ಹಾಕಿದರು.

ವಿಜಯೇಂದ್ರ ಮೇಲುಗೈ :
ಮುಡಾ ಹಗರಣ ಹಾಗೂ ವಾಲೀಕಿ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್‌‍ ಹಮಿಕೊಂಡಿರುವ ಬೆಂಗಳೂರು- ಮೈಸೂರು ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೇಲುಗೈ ಸಾಧಿಸುತ್ತಿದ್ದಾರೆ.

RELATED ARTICLES

Latest News