Friday, November 22, 2024
Homeರಾಜಕೀಯ | Politicsಕಾಂಗ್ರೆಸ್‌‍ ಸರ್ಕಾರದ ಪತನದ ಸಮಯ ಸಮೀಸುತ್ತಿದೆ : ಹೆಚ್‌ಡಿಕೆ ಭವಿಷ್ಯ

ಕಾಂಗ್ರೆಸ್‌‍ ಸರ್ಕಾರದ ಪತನದ ಸಮಯ ಸಮೀಸುತ್ತಿದೆ : ಹೆಚ್‌ಡಿಕೆ ಭವಿಷ್ಯ

ಬೆಂಗಳೂರು, ಆ.5- ರಾಜ್ಯ ಕಾಂಗ್ರೆಸ್‌‍ ಸರ್ಕಾರ ಪತನವಾಗುವ ಸಮಯ ಹತ್ತಿರವಾಗಿದೆ ಎಂದು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಬಿಜೆಪಿ-ಜೆಡಿಎಸ್‌‍ ಹಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನವಾದ ಇಂದು ಕೆಂಗಲ್‌ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪಾದಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ರಾಜ್ಯಕಾಂಗ್ರೆಸ್‌‍ ಸರ್ಕಾರದ ಪಾಪದ ಕೊಡ ತುಂಬಿದ್ದು, ಪತನಗೊಳ್ಳುವ ಕಾಲ ಸಮೀಪಿಸುತ್ತಿದೆ. ಅಧಿಕಾರ ಮಾಡಲು ಕಾಂಗ್ರೆಸ್‌‍ನವರಿಗೆ ಯೋಗ್ಯತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಉಪಮುಖ್ಯಮಂತ್ರಿಯಾಗಿ ಜನರ ಸಮಸ್ಯೆ ಬಗೆಹರಿಸುವುದು ಬಿಟ್ಟು ನನ್ನನ್ನು ಗುಣಗಾನ ಮಾಡಿಕೊಂಡು ಕೂತಿದ್ದಾರೆ. ಮಾತನಾಡಲು ಶಕ್ತಿ ಇಲ್ಲದ ಹುಚ್ಚರಂತೆ ಪದ ಬಳಕೆ ಮಾಡಿಕೊಂಡು ಹೋಗುತ್ತಿದ್ದಾರೆ. ನನ್ನ ಹತ್ತಿರ ಇರುವ ದಾಖಲೆ ತೆಗೆದರೆ ಈ ವ್ಯಕ್ತಿ ಮಾಡಿರುವ ಅವ್ಯವಹಾರದ ಸಂಪುಟವನ್ನೇ ಮಾಡಬಹುದು. ಏನೇನು ಕಟ್ಟಿಕೊಂದ್ದಾರೋ ಎಲ್ಲವನ್ನು ಬಿಚ್ಚಲಿ. ನಿಮ ಗೊಡ್ಡು ಬೆದರಿಕೆಗೆ ನಾನು ಹೆದರುವುದಿಲ್ಲ ಎಂದು ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ.

ಪ್ರಾಯಶ್ಚಿತ ಮಾಡಿಕೊಳ್ಳಬೇಕಾಗಿದ್ದು ಡಿ.ಕೆ. ಶಿವಕುಮಾರ್‌ ಎಂದಿರುವ ಅವರು, ತಪ್ಪು ಮಾಡಿಕೊಂಡು ಪ್ರಾಯಶ್ಚಿತ ಮಾಡಿಕೊಳ್ಳುವುದಿಲ್ಲ ಎಂಬ ಬಂಡ ಮಾತನಾಡುತ್ತಾರೆ. ಶಿವಕುಮಾರ್‌ ಮಾತಿಗೆ ಯಾರು ಗೌರವ ಕೊಡುತ್ತಿಲ್ಲ. ನಾವು ಮಾತನಾಡಿದರೆ ಆ ಮನುಷ್ಯನಿಗೆ ಏನಾಯಿತು. ಈಗಿನ ಪರಿಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪರ ಅವರನ್ನು ನಾನು ಜೈಲಿಗೆ ಕಳಿಸಿಲ್ಲ. ಅವತ್ತಿನ ಸಂದರ್ಭದಲ್ಲಿ ವಿಚಾರ ಹಾಗಿತ್ತು ಎಂದು ಹೇಳಿದ್ದಾರೆ.ಹೆಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಶಾಸಕರಾದ ಸಿ.ಬಿ.ಸುರೇಶ್‌ ಬಾಬು, ಜಿ.ಟಿ.ಹರೀಶ್‌ಗೌಡ, ಮಾಜಿ ಶಾಸಕರಾದ ಡಾ.ಅನ್ನದಾನಿ, ಸಾ.ರಾ.ಮಹೇಶ್‌, ಮಂಜುನಾಥ್‌, ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

RELATED ARTICLES

Latest News