ಕೋಲ್ಕತ್ತಾ,ಆ.8- ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮತ್ರಿ ಹಾಗೂ ಹಿರಿಯ ಸಿಪಿಎಂ ನಾಯಕ ಬುದ್ಧದೇವ್ ಭಟ್ಟಾಚಾರ್ಯ(80) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 8.20ಕ್ಕೆ ನಿಧನರಾಗಿದ್ದಾರೆ ಎಂದು ಬುದ್ದದೇವ ಭಟ್ಟಾಚಾರ್ಯ ಅವರ ಪುತ್ರ ಸುಚೇತನ್ ಅವರು ಖಚಿತಪಡಿಸಿದ್ದಾರೆ.
2000ರಿಂದ 2011ರವರೆಗೆ ಸತತ 11 ವರ್ಷಗಳ ಕಾಲ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ರಾಜ್ಯದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಅವಿಸ್ಮರಣೀಯ ಕೊಡುಗೆಗಳನ್ನು ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಸತತ 34 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಜ್ಯೋತಿಭಸು ಅವರು ನಿಧನರಾದ ನಂತರ ಬುದ್ದದೇವ ಭಟ್ಟಾಚಾರ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಈ ಹಿಂದೆ ಅವರನ್ನು ಅಂದರೆ 2023ರರ ಜುಲೈ 29ರಂದುಕೋಲ್ಕತ್ತಾದ ಅಲಿಪೋರ್‍ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ನ್ಯುಮೋನಿಯಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಚೇತರಿಸಿಕೊಂಡಿದ್ದ ಕಾರಣ ಅವರನ್ನು ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗಿತ್ತು.