ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ-2020ರ ಸೆಕ್ಷನ್ 305ರ ಪ್ರಕಾರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ “ಪೇಯಿಂಗ್ ಗೆಸ್ಟ್” (PGs)ಗಳಿಗೆ ಉದ್ದಿಮೆ ಪರವಾನಗಿಯನ್ನು ನೀಡುವಾಗ ಮಾರ್ಗಸೂಚಿ ಪಾಲನೆಯ ಆದೇಶ ಜಾರಿ ಮಾಡಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-2020ರ ಕಾಯ್ದೆಯಡಿ, ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ “ಪೇಯಿಂಗ್ ಗೆಸ್ಟ್’ (PGs)ಗಳಿಗೆ ‘ಪರವಾನಿಗೆ ಮಂಜೂರಾತಿ’/’ನವೀಕರಣ’ ಹಾಗೂ ಈಗಾಗಲೇ ಪರವಾನಿಗೆ ಪಡೆದು ಅಸ್ತಿತ್ವದಲ್ಲಿರುವ ಪೇಯಿಂಗ್ ಗೆಸ್ಟ್ಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
- ಪೇಯಿಂಗ್ ಗೆಸ್ಟ್ಗಳಲ್ಲಿನ ಎಲ್ಲಾ ಪ್ರವೇಶ/ನಿರ್ಗಮನ ದ್ವಾರ, ಮತ್ತು ಆವರಣದ ಸುತ್ತಮುತ್ತಲಿನ ಘಟನಾವಳಿಗಳನ್ನು ಚಿತ್ರೀಕರಿಸಲು ಸಿ.ಸಿ. ಟಿ.ವಿ. ಕ್ಯಾಮೆರಾಗಳನ್ನು ಅಳವಡಿಸಿರತಕ್ಕದ್ದು. ಪ್ರತಿಯೊಂದು ಸಿ.ಸಿ ಟಿ.ವಿ. ಕ್ಯಾಮರಾದ ವೀಡಿಯೋ ಮತ್ತು ಫೋಟೇಜ್ಗಳನ್ನು 90 ದಿನಗಳವರೆಗೆ ಹಾರ್ಡ್ ವೇರ್ & ಸಾಫ್ಟ್ವೇರ್ ಬ್ಯಾಕಪ್ ಸ್ಟೋರೆಜ್ನ್ನು ಸಂರಕ್ಷಿಸತಕ್ಕದ್ದು.
- ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪೇಯಿಂಗ್ ಗೆಸ್ಟ್ಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿಗಳ ಕನಿಷ್ಠ ಜಾಗವಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕಟ್ಟಡದಲ್ಲಿ ಒದಗಿಸಲಾದ/ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ಧಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡತಕ್ಕದ್ದು.
- ಪೇಯಿಂಗ್ ಗೆಸ್ಟ್ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವಚ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೇವೆಯನ್ನು ಒದಗಿಸಿರತಕ್ಕದ್ದು.
- ಪೇಯಿಂಗ್ ಗೆಸ್ಟ್ಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರತಕ್ಕದ್ದು. ಪ್ರತಿಯೊಬ್ಬ నివాసిగి 135 LPCD ನೀರಿನ ಲಭ್ಯತೆ ಇರುವುದನ್ನು ಮಾಲೀಕರು/ಉದ್ದಿಮೆದಾರರು ಖಚಿತಪಡಿಸಿಕೊಳ್ಳತಕ್ಕದ್ದು.
- ಪೇಯಿಂಗ್ ಗೆಸ್ಟ್ ಗಳಲ್ಲಿ ಉದ್ದಿಮೆದಾರರು ತಮ್ಮದೇ ಆದ ಅಡುಗೆಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ 03 ತಿಂಗಳ ಅವಧಿಯೊಳಗೆ ಕಡ್ಡಾಯವಾಗಿ FSSAI ಇಲಾಖೆಯಿಂದ ಲೈಸನ್ಸ್ನ್ನು ಪಡೆದುಕೊಳ್ಳತಕ್ಕದ್ದು.
- ಉದ್ದಿಮೆದಾರರು/ಮಾಲೀಕರು ಪೇಯಿಂಗ್ ಗೆಸ್ಟ್ಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಟ ಪಕ್ಷ 01 ಸಿಬ್ಬಂದಿಯನ್ನಾದರೂ ಕಡ್ಡಾಯವಾಗಿ 24*7 ಸೇವೆಯಡಿಯಲ್ಲಿ ನಿಯೋಜಿಸಿರತಕ್ಕದ್ದು.
- ಪೇಯಿಂಗ್ ಗೆಸ್ಟ್ ಉದ್ದಿಮೆಗಳಿಗೆ ಪಾಲಿಕೆಯಿಂದ ವಾಣಿಜ್ಯ ಪರವಾನಿಗೆ ಪತ್ರ ವಿತರಿಸುವ ಮುನ್ನ ಉದ್ದೇಶಿತ ಕಟ್ಟಡದಲ್ಲಿ ಮಾಲೀಕರು ಅಗ್ನಿ ಸುರಕ್ಷತಾ ಕ್ರಮಗಳನ್ನು ಆಳವಡಿಸಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಪ್ರಮಾಣ ಪತ್ರವನ್ನು ಪಡೆದುಕೊಂಡಿರುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.
- ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ, ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ-1533 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ:101 ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಿರುವುದನ್ನು ಖಚಿತಪಡಿಸಿಕೊಳ್ಳಟ್ಟಿದ್ದು.
- ಪೇಯಿಂಗ್ ಗೆಸ್ಟ್ಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ(First Aid Kits)ಗಳನ್ನು ಆಳವಡಿಸಿರತಕ್ಕದ್ದು.
- ಪೇಯಿಂಗ್ ಗೆಸ್ಟ್ನ ಮಾಲೀಕರು ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ವಿಲೇವಾರಿಗೊಳಸಲು ಕ್ರಮವಹಿಸತಕ್ಕದ್ದು.
ವಲಯ ಆರೊಗ್ಯಾಧಿಕಾರಿಯವರು, ಆರೋಗ್ಯ ವೈದ್ಯಾಧಿಕಾರಿಗಳು ಮತ್ತು ಹಿರಿಯ ಆರೋಗ್ಯ ಪರಿವೀಕ್ಷಕರು ತಮ್ಮ-ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಮೇಲ್ಕಂಡ ಮಾರ್ಗಸೂಚಿಗಳ ಪಾಲನೆಯಾಗುತ್ತಿರುವ ಕುರಿತು ಪ್ರತೀ ಆರು ತಿಂಗಳಿಗೊಮ್ಮೆ ಖಚಿತಪಡಿಸಿಕೊಳ್ಳತಕ್ಕದ್ದು.
ಎಲ್ಲಾ ವಲಯ ಆಯುಕ್ತರುಗಳು ಮೇಲ್ಕಂಡ ಮಾರ್ಗಸೂಚಿಗಳ ಪಾಲನೆಯಾಗುತ್ತಿರುವುದರ ಕುರಿತು ಪರಿಶೀಲಿಸಿ ಖಚಿತಪಡಿಸಿಕೊಳ್ಳತಕ್ಕದ್ದು ಹಾಗೂ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವ ಉದ್ದಿಮೆದಾರರ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-2020ರ ಕಾಯ್ದೆ ಸೆಕ್ಷನ್ 307 & 308ರಂತೆ ಅಗತ್ಯ ಕ್ರಮ ಜರುಗಿಸಲು ಮುಖ್ಯ ಆಯುಕ್ತರು ಸೂಚಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮಾರ್ಗಸೂಚಿ ಆದೇಶದ ಪ್ರತಿಯನ್ನು ಲಗತ್ತಿಸಿದೆ.