Friday, November 22, 2024
Homeಅಂತಾರಾಷ್ಟ್ರೀಯ | Internationalಢಾಕಾದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಪ್ರತಿಭಟನೆ

ಢಾಕಾದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಪ್ರತಿಭಟನೆ

ಢಾಕಾ,ಆ.10- ಬೃಹತ್ ಪ್ರತಿಭಟನೆ ಮೂಲಕ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದ ಬಾಂಗ್ಲಾದ ಪ್ರತಿಭಟನಾನಿರತರು ಇದೀಗ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ರಾಜೀನಾಮೆಗೂ ಪಟ್ಟು ಹಿಡಿದಿದ್ದಾರೆ.ಬಹುಪಾಲು ವಿದ್ಯಾರ್ಥಿಗಳನ್ನೊಳಗೊಂಡ ನೂರಾರು ಪ್ರತಿಭಟನಾಕಾರರು ಬಾಂಗ್ಲಾದೇಶದ ಸುಪ್ರೀಂಕೋರ್ಟ್ನ್ನು ಸುತ್ತುವರೆದಿದ್ದು, ಮುಖ್ಯ ನ್ಯಾಯಮೂರ್ತಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಹೊಸದಾಗಿ ರಚನೆಯಾದ ಮಧ್ಯಂತರ ಸರ್ಕಾರದ ಸಮಾಲೋಚನೆ ನಡೆಸದೆ ಮುಖ್ಯ ನ್ಯಾಯಮೂರ್ತಿಗಳು ಕರೆದಿದ್ದ ಪೂರ್ಣ ನ್ಯಾಯಾಲಯದ ಸಭೆಯು ಪ್ರತಿಭಟನೆಗೆ ಕಾರಣವಾಗಿದೆ.ದ್ವಿಗ್ನತೆ ಹೆಚ್ಚಾದಂತೆ, ನಿಗದಿತ ಪೂರ್ಣ ನ್ಯಾಯಾಲಯದ ಸಭೆಯನ್ನು ಹಠಾತ್ ರದ್ದುಗೊಳಿಸಲಾಗಿದೆ.

ನ್ಯಾಯಾಲಯದ ನ್ಯಾಯಾಧೀಶರು ಪಿತೂರಿಯಲ್ಲಿ ಭಾಗವಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದು. ಮುಖ್ಯ ನ್ಯಾಯಾಧೀಶರು ಆವರಣದಿಂದ ಪಲಾಯನ ಮಾಡಿದ್ದಾರೆಂದು ತಿಳಿದು ಮತ್ತಷ್ಟು ಪರಿಸ್ಥಿತಿಯು ಉಲ್ಬಣಗೊಂಡಿದೆ.

ಸರ್ಕಾರದ ನೇಮಕಾತಿ ನಿಯಮಗಳ ವಿರುದ್ಧ ವಿದ್ಯಾರ್ಥಿಗಳ ನೇತೃತ್ವದ ದಂಗೆಯು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮುಹಮದ್ ಯೂನಸ್ ಉಸ್ತುವಾರಿ ಸರ್ಕಾರದ ಅಧಿಕಾರ ವಹಿಸಿಕೊಂಡ ಕೆಲವು ದಿನಗಳ ನಂತರ ಪ್ರತಿಭಟನೆಗಳು ಮತ್ತಷ್ಟು ಹೆಚ್ಚಾಗಿದೆ.

76 ವರ್ಷದ ಪ್ರಧಾನಿ ಶೇಖ್ ಹಸೀನಾ ಅವರ ನಿರಂಕುಶ ಆಡಳಿತವನ್ನು ಕೊನೆಗೊಳಿಸಿದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆದ ಮಾರಣಾಂತಿಕ ಪ್ರತಿಭಟನೆಯಲ್ಲಿ ಕನಿಷ್ಠ 450 ಜನರು ಸಾವನ್ನಪ್ಪಿದ್ದರು.

ಹಸೀನಾ ಅವರು ಕೊಲೆ, ಬಲವಂತದ ನಾಪತ್ತೆ, ಮನಿ ಲಾಂಡರಿಂಗ್ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರು ಕಾನೂನು ಸಂಘರ್ಷವನ್ನು ಎದುರಿಸಬೇಕಿದೆ ಎಂದು ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಕ್ಷದ ಹಿರಿಯ ಸದಸ್ಯ ಅಮೀರ್ ಖೋಸ್ರು ಮಹಮೂದ್ ಚೌಧರಿ ಹೇಳಿದ್ದಾರೆ.

ಸುದೀರ್ಘ ಸೇವೆ ಸಲ್ಲಿಸಿದ ನಾಯಕಿಯರಲ್ಲಿ ಒಬ್ಬರಾದ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಲಕ್ಷಾಂತರ ಪ್ರತಿಭಟನಾಕಾರರು ವಾರಗಟ್ಟಲೇ ಪ್ರತಿಭಟನೆ ಮಾಡಿದ್ದರು. ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಶೇಖ್ ಹಸೀನಾ ಅವರು ಆ.5ರಂದು ರಾಜೀನಾಮೆ ನೀಡಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಮುಹಮದ್ ಯೂನಸ್ ನೇತೃತ್ವದಲ್ಲಿ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ನೇಮಿಸಲಾಯಿತು.

ಸಂವಿಧಾನದಡಿ 90 ದಿನಗಳಲ್ಲಿ ಚುನಾವಣೆಯನ್ನು ಕರೆಯಬೇಕಾಗಿದೆ, ಆದಾಗ್ಯೂ ಯೂನಸ್, ಮಿಲಿಟರಿ – ಮಧ್ಯಂತರ ಸರ್ಕಾರವನ್ನು ಬೆಂಬಲಿಸುತ್ತದೆ ಮತ್ತು ಅಧ್ಯಕ್ಷೀಯ ಚುನಾವಣೆಗಳು ಯಾವಾಗ ನಡೆಯಲಿದೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

RELATED ARTICLES

Latest News