ಸ್ಯಾಂಡಲ್‌ವುಡ್ ಬಾದ್ ಷಾ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಈಗಾಗಲೇ ನಿರ್ಮಾಪಕಿ ಹಾಗೂ ವಿತರಕಿಯಾಗಿರುವ ಪ್ರಿಯಾ ಸುದೀಪ್, ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡಲು ಮುಂದಾಗಿದ್ದಾರೆ.
ಪ್ರಿಯಾ ಸುದೀಪ್ ಅವರು ಸುಪ್ರಿಯಾನ್ವಿ ಸ್ಟುಡಿಯೋ ಮೂಲಕ ಮ್ಯಾಂಗೋ ಪಚ್ಚ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಗೊತ್ತೇ ಇದೆ. ಅಲ್ಲದೇ ಇತ್ತೀಚೆಗೆ ಮ್ಯಾಕ್‌್ಸ ಚಿತ್ರದ ವಿತರಣೆ ಮಾಡುವ ಮೂಲಕ ವಿತರಣೆ ಜವಾಬ್ದಾರಿ ನಿಭಾಯಿಸಿದ್ದಾರೆ. ಇದೀಗ ತಮ್ಮದೇ ಸುಪ್ರಿಯಾನ್ವಿ ಮೂಲಕ ಹೊಸ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ತೀರ್ಮಾನ ಮಾಡಿದ್ದಾರೆ.
