ಟೆಲ್‍ಅವೀವ್,ಅ.22- ಹಮಾಸ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಮಧ್ಯೆ ಗಾಜಾ ಪಟ್ಟಿಯಲ್ಲಿರುವ ಕಲಹದಿಂದ ನಲುಗುತ್ತಿರುವ ಪ್ಯಾಲೆಸ್ತೇನಿಯಾದವರಿಗೆ ಭಾರತ ಇಂದು ಮಾನವೀಯ ನೆರವು ಕಳುಹಿಸಿದೆ. ಪ್ಯಾಲೆಸ್ತೀನ್ ಜನರಿಗಾಗಿ ಸುಮಾರು 6.5 ಟನ್‍ಗಳಷ್ಟು ವೈದ್ಯಕೀಯ ನೆರವು ಮತ್ತು 32 ಟನ್‍ಗಳಷ್ಟು ವಿಪತ್ತು ಪರಿಹಾರ ಸಾಮಗ್ರಿಗಳನ್ನು ಹೊತ್ತ ಐಎಎಫ್‍ಸಿ-17 ವಿಮಾನವು ಈಜಿಪ್ಟ್‍ನ ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ ಹೊರಟಿದೆ.
ವಸ್ತುವು ಅಗತ್ಯ ಜೀವ ಉಳಿಸುವ ಔಷಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್‍ಗಳು, ಮಲಗಲು ಒಳಗೊಂಡಿದೆ ಬ್ಯಾಗ್‍ಗಳು, ಟಾರ್ಪೌಲಿನ್‍ಗಳು, ಸ್ಯಾನಿಟರಿ ಯುಟಿಲಿಟೀಸ್, ನೀರು ಶುದ್ಧೀಕರಣ ಮಾತ್ರೆಗಳು ಇತರ ಅಗತ್ಯ ವಸ್ತುಗಳನ್ನು ರವಾನಿಸಲಾಗಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸುಮಾರು 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಪ್ಯಾಲೆಸ್ತೈನ್‍ಗೆ ಕಳುಹಿಸಲಾಗಿದೆ, ಅದು ಈಜಿಪ್ಟ್ ಮೂಲಕ ಆ ದೇಶವನ್ನು ತಲುಪಲಿದೆ ಎಂದು ತಿಳಿಸಿದ್ದಾರೆ.
ಗಾಜಾವನ್ನು ಸಂಪೂರ್ಣ ವಶಕ್ಕೆ ಪಡೆದಿರುವುದಾಗಿ ಇಸ್ರೇಲ್ ಘೋಷಣೆ ಮಾಡಿದ್ದು, ನೀರು, ವಿದ್ಯುತ್, ಇಂಧನ ಮತ್ತು ಆಹಾರ ಪೂರೈಕೆಯನ್ನು ಸ್ಥಗಿತಗೊಳಿಸಿದ್ದು, ದೀರ್ಘಕಾಲ ಕೊರತೆಯನ್ನು ಸೃಷ್ಟಿಸುತ್ತಿದೆ. ಇಸ್ರೇಲ್ ನಿಯಂತ್ರಣಕ್ಕೆ ಒಳಗಾಗದ ರಫಾ ಗಡಿ ಒಂದೇ ಗಾಜಾಗೆ ಇರುವ ಏಕೈಕ ಮಾರ್ಗವಾಗಿದೆ.
ತಮ್ಮ ಮಿತ್ರ ದೇಶವಾಗಿರುವ ಯುನೈಟೆಡ್ ಸ್ಟೇಟ್ಸ್ ಮನವಿಯ ಮೇರೆಗೆ ಈಜಿಪ್ಟ್‍ನಿಂದ ಗಾಜಾಗೆ ನೆರವು ಸಾಗಿಸಲು ಇಸ್ರೇಲ್ ಅನುಮತಿಸಿದೆ. ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳು ರಫಾ ಗಡಿಯ ಮೂಲಕ ಗಾಜಾಗೆ ತಲುಪಲಿದೆ.
ಬ್ರೇಕಿಂಗ್ : ಮೈಸೂರು ದಸರಾ ಮೇಲೆ ಉಗ್ರರ ಕಣ್ಣು, ಹೈಅಲರ್ಟ್ ಘೋಷಣೆ..!
ವಿಶ್ವಸಂಸ್ಥೆಯ ವಿವಿಧ ಏಜೆನ್ಸಿಗಳಿಂದ ಬಂದ ನೆರವನ್ನು ಗಾಜಾಗೆ ತಲುಪಿಸುವ ಜವಾಬ್ದಾರಿಯನ್ನು ಈಜಿಪ್ಟಿನ ರೆಡ್ ಕ್ರೆಸೆಂಟ್ ಕಚೇರಿಯು ಹೊತ್ತಿದೆ. ನಿನ್ನೆ ಇಪ್ಪತ್ತು ಟ್ರಕ್‍ಗಳು ಈಜಿಪ್ಟಿನ ಟರ್ಮಿನಲ್‍ನ್ನು ಪ್ರವೇಶಿಸಿದ್ದವು. ಪ್ಯಾಲೆಸ್ತೀನ್ ಕಡೆಯ 36 ಖಾಲಿ ಟ್ರೇಲರ್‍ಗಳು ಟರ್ಮಿನಲ್‍ಗೆ ಪ್ರವೇಶಿಸಿ ಈಜಿಪ್ಟಿನ ಕಡೆಗೆ ಹೋಗಿ, ನೆರವನ್ನು ಲೋಡ್ ಮಾಡಿಕೊಂಡು ರಫಾ ಗಡಿಯ ಮೂಲಕ ಗಾಜಾಗೆ ತೆರಳಿದವು.
ವಿಶ್ವಸಂಸ್ಥೆಯ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸಹ ಈಜಿಪ್ಟ್ ಕ್ರಾಸಿಂಗ್ ಬದಿಗೆ ಭೇಟಿ ನೀಡಿ ನೆರವು ವಿತರಣೆಯ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಿದರು. ಇವು ಕೇವಲ ಟ್ರಕ್‍ಗಳಲ್ಲ, ಜೀವರಕ್ಷಕಗಳು ಎಂದು ಮಾಧ್ಯಮಗಳಿಗೆ ಇದೇ ಸಂದರ್ಭದಲ್ಲಿ ತಿಳಿಸಿದರು.
ಅ.7ರ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಡೆಸುತ್ತಿರುವ ದಾಳಿಗೆ ಗಾಜಾ ಸಂಪೂರ್ಣ ನಲುಗಿ ಹೋಗಿದೆ. ವೆಸ್ಟ್ ಬ್ಯಾಂಕ್‍ನಲ್ಲೂ ಇಸ್ರೇಲ್ ರಕ್ಷಣಾ ಪಡೆಗಳು ದಾಳಿ ನಡೆಸುತ್ತಿವೆ. ಇಸ್ರೇಲ್ ನಡೆಸಿದ ಬಾಂಬ್ ದಾಳಿಯಲ್ಲಿ ಈವರೆಗೂ 4300ಕ್ಕೂ ಅಕ ಮಂದಿ ಪ್ಯಾಲೆಸ್ತೀನ್‍ನಲ್ಲಿ ಮೃತಪಟ್ಟಿದ್ದಾರೆ. ಅದರಲ್ಲಿ ಹೆಚ್ಚಿನವರು ನಾಗರಿಕರು ಎಂದು ಹಮಾಸ್ ನಡೆಸುವ ಆರೋಗ್ಯ ಸಚಿವಾಲಯ ತಿಳಿಸಿದೆ.
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವೂ ಎರಡು ವಾರಗಳನ್ನು ಪೂರೈಸಿ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ ಕದನ ಕಾರ್ಮೋಡ ಮಾತ್ರ ತಿಳಿಯಾಗಿಲ್ಲ. ಈಜಿಪ್ಟ್‍ನಲ್ಲಿ ನಡೆದ ಶಾಂತಿ ಶೃಂಗಸಭೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಮಾನವೀಯ ಕದನ ವಿರಾಮಕ್ಕಾಗಿ ಒತ್ತಾಯಿಸಿದ್ದಾರೆ. ಆದರೂ ಇಸ್ರೇಲ್ ಮಾತ್ರ ಗಾಜಾ ಮೇಲಿನ ತನ್ನ ದಾಳಿಯನ್ನು ಮುಂದುವರಿಸಿದೆ.