Saturday, September 21, 2024
Homeರಾಷ್ಟ್ರೀಯ | Nationalಅಬಕಾರಿ ನೀತಿ ಹಗರಣ : ಬಿಆರ್‌ಎಸ್‌‍ ನಾಯಕಿ ಕೆ.ಕವಿತಾ ಜಾಮೀನು ಮಂಜೂರು

ಅಬಕಾರಿ ನೀತಿ ಹಗರಣ : ಬಿಆರ್‌ಎಸ್‌‍ ನಾಯಕಿ ಕೆ.ಕವಿತಾ ಜಾಮೀನು ಮಂಜೂರು

SC grants bail to K. Kavitha in excise policy case

ನವದೆಹಲಿ, ಅ 27 (ಪಿಟಿಐ) ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್‌‍ ನಾಯಕಿ ಕೆ ಕವಿತಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಮತ್ತು ಕೆ ವಿ ವಿಶ್ವನಾಥನ್‌ ಅವರ ಪೀಠವು ಕವಿತಾ ಅವರು ಸುಮಾರು ಐದು ತಿಂಗಳಿನಿಂದ ಕಾರಾಗೃಹದಲ್ಲಿ ಇದ್ದಾರೆ ಮತ್ತು ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಈ ಪ್ರಕರಣಗಳಲ್ಲಿ ತನಿಖೆ ಪೂರ್ಣಗೊಂಡಿದೆ ಎಂದು ಗಮನಿಸಿದರು.

ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌ ಜುಲೈ 1 ರ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆಇದೀಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಕ್ರಿಮಿನಲ್‌ ಪಿತೂರಿಯಲ್ಲಿ ಕವಿತಾ ಅವರು ಪ್ರಾಥಮಿಕವಾಗಿ ಪ್ರಮುಖ ಸಂಚುಗಾರರಲ್ಲಿ ಒಬ್ಬರು ಎಂದು ಹೇಳುವ ಮೂಲಕ ಎರಡೂ ಪ್ರಕರಣಗಳಲ್ಲಿ ಕವಿತಾ ಅವರ ಜಾಮೀನು ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಮಾರ್ಚ್‌ 15 ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇಡಿ ಕವಿತಾ (46) ಅವರನ್ನು ಬಂಧಿಸಿತು. ಏಪ್ರಿಲ್‌ 11 ರಂದು ಅವರುತಿಹಾರ್‌ ಜೈಲಿನಲ್ಲಿದ್ದರು. ಎರಡು ಪ್ರಕರಣಗಳಲ್ಲಿ ತಲಾ 10 ಲಕ್ಷ ರೂ.ಗಳ ಜಾಮೀನು ಬಾಂಡ್‌ಗಳನ್ನು ನೀಡುವಂತೆ, ಪಾಸ್‌‍ಪೋರ್ಟ್‌ ಅನ್ನು ವಿಚಾರಣಾ ನ್ಯಾಯಾಲಯಕ್ಕೆ ಒಪ್ಪಿಸುವಂತೆ ,ಸಾಕ್ಷಿಗಳನ್ನು ಹಾಳುಮಾಡುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡಬಾರದು ಎಂದು ನ್ಯಾಯಾಲಯ ಎಚ್ಚರಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಪೀಠವು ಈ ಪ್ರಕರಣಗಳ ತನಿಖೆಯಲ್ಲಿ ತನಿಖಾ ಸಂಸ್ಥೆಗಳ ನ್ಯಾಯಸಮತತೆಯನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿತ್ತು.

RELATED ARTICLES

Latest News