Friday, September 20, 2024
Homeರಾಷ್ಟ್ರೀಯ | Nationalಮುಡಾ ಹಗರಣಕ್ಕೆ ದಿನಕ್ಕೊಂದು ಟ್ವಿಸ್ಟ್, ಹಿಂದಿನ ಆಯುಕ್ತರ ವಿರುದ್ಧ `ಲೋಕಾ'ಗೆ ದೂರು

ಮುಡಾ ಹಗರಣಕ್ಕೆ ದಿನಕ್ಕೊಂದು ಟ್ವಿಸ್ಟ್, ಹಿಂದಿನ ಆಯುಕ್ತರ ವಿರುದ್ಧ `ಲೋಕಾ’ಗೆ ದೂರು

Muda scam: Complaint to Lokayukta against former commissioner


ಮೈಸೂರು,ಸೆ.1- ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮುಡಾ ಆಯುಕ್ತರಾಗಿದ್ದ ಇಬ್ಬರ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.ಕೆಎಎಸ್ ಅಧಿಕಾರಿಗಳಾದ ನಟೇಶ್, ದಿನೇಶ್ ಕುಮಾರ್ ಅವರ ವಿರುದ್ಧ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.ಈ ಇಬ್ಬರೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೂಡಲೇ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧಿಸಬೇಕು.

ಇದಲ್ಲದೆ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳಿಂದಲೇ ಹಣ ವಸೂಲಿ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಕ್ರಮವಾಗಿ 50:50 ಅನುಪಾತದಲ್ಲಿ ಸರಿ ಸುಮಾರು 5.00 ಲಕ್ಷ ಚ.ಅ. ಗೂ ಹೆಚ್ಚಿನ ನಿವೇಶನಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿರುವುದು ಕಂಡುಬಂದ ಹಿನ್ನಲೆಯಲ್ಲಿ ಅಂತಹ ಆದೇಶಗಳನ್ನು ರದ್ದುಗೊಳಿಬೇಕು.

ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ, ಕೆಎಎಸ್ ಅಧಿಕಾರಿ ದಿನೇಶ್ ಕುಮಾರ್ ಜಿ.ಟಿರವರ ವಿರುದ್ಧ ಮತ್ತು ಇಂತಹ ಪ್ರಕರಣಗಳಲ್ಲಿ ಭಾಗಿಯಾದಂತಹ ಇತರೆ ಅಧಿಕಾರಿ ವರ್ಗದವರ ಮೇಲೆ ಸೂಕ್ತ ತನಿಖೆ ನಡೆಸಿ ಸರಿಯಾದ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಮಾನ್ಯ ಪ್ರಧಾನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರಿಗೆ ಸೂಕ್ತ ದಾಖಲೆಗಳೊಂದಿಗೆ ಪತ್ರ ಬರೆದಿದ್ದರೂ ಸಹ ಈ ತನಕ ಇವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 5,000 ಕೋಟಿಗಳಷ್ಟು ನಷ್ಟ ಉಂಟಾಗಿದೆ.ಈ ಕೂಡಲೇ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ವರ್ಗದವರನ್ನು ಬಂಧಿಸಿ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಸದರಿ ಅಧಿಕಾರಿಗಳಿಂದಲೇ ಭರಿಸುವಂತೆ ಸೂಕ್ತ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದ್ದಾರೆ.

RELATED ARTICLES

Latest News