Thursday, September 19, 2024
Homeರಾಜಕೀಯ | Politicsಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ : ಆರ್.ಅಶೋಕ್ ವ್ಯಂಗ್ಯ

ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ : ಆರ್.ಅಶೋಕ್ ವ್ಯಂಗ್ಯ

R Ashok troll Congress Govt

ಬೆಂಗಳೂರು,ಸೆ.3– ಕಾಂಗ್ರೆಸ್ ನೇತೃತ್ವದ ಈ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಈ ಕುರಿತು ತಮ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಸರ್ಕಾರದ ಪೋಸ್ಟ್ ಮಾಡಿರುವ ಅಶೋಕ್ ಅವರು, ಅಪನಂಬಿಕೆ ಸರ್ಕಾರದಿಂದ ನಂಬಿಕೆ ಯೋಜನೆ ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ನಂಬಿಕೆ ನಕ್ಷೆ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯವಷ್ಟೇ ಎಂಬುದು ಬೆಂಗಳೂರಿನ ಜನತೆಯ ಬಲವಾದ ನಂಬಿಕೆ ಎಂದು ಕುಹಕವಾಡಿದ್ದಾರೆ.

ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅನೇಕ ಹೇಳಿಕೆಗಳು ಘೋಷಣೆಯಲ್ಲೇ ಉಳಿದಿರುವುದರಿಂದ ಸಾರ್ವಜನಿಕರಿಗೆ ಇವರ ಮೇಲೆ ಕಿಂಚಿತ್ತೂ ನಂಬಿಕೆಯೇ ಇಲ್ಲದಂತಾಗಿದೆ ಎಂದು ಅನುಮಾನ ಹೊರಹಾಕಿದ್ದಾರೆ.

ಬೆಂಗಳೂರಿನ ಜನತೆಗೆ ಮೇಕೆದಾಟು ನೀರು ಸಿಗುವ ನಂಬಿಕೆ ಇಲ್ಲ. ರಸ್ತೆ ಗುಂಡಿ ಮುಚ್ಚುವ ಬಗ್ಗೆ ನಂಬಿಕೆ ಇಲ್ಲ. ಮನೆ ಬಾಗಿಲಿಗೆ ಆಡಳಿತ ಘೋಷಣೆ ಬಗ್ಗೆ ನಂಬಿಕೆ ಇಲ್ಲ.

ಕಾನೂನು ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ.ನುಡಿದಂತೆ ನಡೆದಿದ್ದೇವೆ ಎಂಬ ಬಗ್ಗೆ ನಂಬಿಕೆ ಇಲ್ಲ. ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆಯಂತೂ ಎಳ್ಳಷ್ಟೂ ನಂಬಿಕೆ ಇಲ್ಲ ಎಂದು ಅಶೋಕ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

RELATED ARTICLES

Latest News