Friday, November 22, 2024
Homeಬೆಂಗಳೂರುಉಪವಾಸ ಸತ್ಯಾಗ್ರಹದ ಹಾದಿ ಹಿಡಿದ ಗುತ್ತಿಗೆದಾರರು

ಉಪವಾಸ ಸತ್ಯಾಗ್ರಹದ ಹಾದಿ ಹಿಡಿದ ಗುತ್ತಿಗೆದಾರರು

BBMP Contractors

ಬೆಂಗಳೂರು,ಸೆ.4- ಬಾಕಿ ಬಿಲ್‌ ಪಾವತಿಗೆ ಒತ್ತಾಯಿಸಿ ಬಿಬಿಎಂಪಿ ಗುತ್ತಿಗೆದಾರರು ನಡೆಸುತ್ತಿ ರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ.ಬಿಬಿಎಂಪಿ ತಡೆಹಿಡಿದಿದ್ದ ಶೇ.25ರಷ್ಟು ಬಾಕಿ ಬಿಲ್‌ ಬಿಡುಗಡೆಗಾಗಿ ಒತ್ತಾಯಿಸಿ ಗುತ್ತಿಗೆ ದಾರರು ಕಳೆದ ಮೂರು ದಿನಗಳಿಂದ ನಗರದಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎರಡು ದಿನಗಳ ಪ್ರತಿಭಟನೆಗೆ ಸರ್ಕಾರ ಕವಡೆ ಕಾಸಿನ ಕಿಮತ್ತು ನೀಡದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಇಂದಿನಿ ಫ್ರೀಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ಬೆಳಗ್ಗೆ 11 ಗಂಟೆಯಿಂದ ಸಂಜೆ 5ಗಂಟೆವರಗೆ ಉಪವಾಸ ಸತ್ಯಾಗ್ರಹ ನಡೆಸುವುದರ ಜೊತೆಗೆ ಗುತ್ತಿಗೆದಾರರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.ಸರ್ಕಾರ ಬಾಕಿ ಇರುವ ನಮ ಬಿಲ್‌ ಬಿಡುಗಡೆ ಮಾಡುವವರೆಗೆ ಯಾವುದೇ ಕಾರಣಕ್ಕೂ ಕಾಮಗಾರಿ ಆರಂಭಿಸುವುದಿಲ್ಲ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್‌ ಹೇಳಿದ್ದಾರೆ.

ಈಗಾಗಲೇ ಬಿಬಿಎಂಪಿ ಮುಖ್ಯ ಅಯುಕ್ತರಿಗೆ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಮಾಡಿಕೊಂಡಿದ್ದೇವೆ ಆದರೂ ನಮ ಬೇಡಿಕೆ ಈಡೆರದ ಕಾರಣ ಉಪವಾಸ ಸತ್ಯಾಗ್ರಹ ಹಮಿಕೊಂಡಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾವು ಯಾರನ್ನೂ ಬ್ಲಾಕ್‌ಮೇಲ್‌ ಮಾಡುವ ಉದ್ದೇಶದಿಂದ ಈ ಪ್ರತಿಭಟನೆ ನಡೆಸುತ್ತಿಲ್ಲ. ಬಿಲ್‌ ಬಿಡುಗಡೆಯಿಂದ ಆಗಿರುವ ತೊಂದರೆಯನ್ನು ನಿವಾರಿಸಿಕೊಳ್ಳುವ ಉದ್ದೇಶದಿಂದ ನಾವು ಹೋರಾಟ ಹಾದಿ ಹಿಡಿದಿದ್ದೇವೆ ನಮ ಬೇಡಿಕೆ ಈಡೆರದಿದ್ದರೆ ರಾಜ್ಯದಾದ್ಯಂತ ಇರುವ ಗುತ್ತಿಗೆದಾರರು ನಗರಕ್ಕೆ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಎಚ್ಚರಿಸಿದರು.

ನಮ ಪ್ರತಿಭಟನೆಯ ನೇತೃತ್ವವನ್ನು ಕೆಂಪಣ್ಣ ಅವರು ವಹಿಸಿಕೊಂಡಿದ್ದಾರೆ. ಒಂದು ವೇಳೆ ನಮ ಬಿಲ್‌ ಬಿಡುಗಡೆಯಾಗದಿದ್ದರೆ ನಾಳೆಯಿಂದ ಕಸ ಎತ್ತುವ ಕಾರ್ಯವನ್ನು ಸ್ಥಗಿತಗೊಳಿಸುವುದಾಗಿ ಕಸ ವಿಲೇವಾರಿ ಗುತ್ತಿಗೆದಾರರು ನಮಗೆ ತಿಳಿಸಿದ್ದಾರೆ ಎಂದು ಅವರು ಹೇಳಿದರು.

RELATED ARTICLES

Latest News