Friday, November 22, 2024
Homeರಾಜ್ಯಅದ್ಧೂರಿ ದಸರಾಗೆ ಸಕಲ ಸಿದ್ಧತೆ

ಅದ್ಧೂರಿ ದಸರಾಗೆ ಸಕಲ ಸಿದ್ಧತೆ

HC Mahadevappa

ಮೈಸೂರು, ಸೆ.5– ಈ ಬಾರಿ ಅದ್ದೂರಿ ದಸರಾ ಆಚರಣೆಗೆ ತೀರ್ಮಾನಿಸಿದ್ದು, ಅದಕ್ಕಾಗಿ ರಚಿಸಿರುವ 19 ಉಪಸಮಿತಿಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ ತಿಳಿಸಿದರು.

ಅರಮನೆ ಸಭಾಂಗಣದಲ್ಲಿ ಹಮಿ ಕೊಂಡಿದ್ದ ದಸರಾ ಉಪಸಮಿತಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿದಸರಾ ಆಚರಣೆ ಮಾಡಬೇಕು ಎಂದು ಸೂಚಿಸಿದರು.

ಸ್ತಬ್ಧ ಚಿತ್ರಗಳು ನಮ ಸಂಸ್ಕೃತಿಯನ್ನು ಬಿಂಬಿಸುವಂತೆ ಹಾಗೂ ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ ಇರಬೇಕು. ಸಂವಿಧಾನದ ಸಂದೇಶ, ಪೂರ್ವ ಪೀಠಿಕೆಯ ಮಹತ್ವವನ್ನು ತಿಳಿಸುವ ಸ್ಥಬ್ದ ಚಿತ್ರ ತಯಾರಿಕೆ ಮಾಡಬೇಕು ಎಂದು ಸಲಹೆ ನೀಡಿದರು.

ರೈತರು ದೇಶದ ಬೆನ್ನೆಲುಬು. ರೈತ ದಸರಾದಲ್ಲಿ ರೈತರಿಗೆ ಅನುಕೂಲ ವಾಗುವ ಕೃಷಿ ಸಾಧನ ಸಲಕರಣೆಗಳ ಪ್ರದರ್ಶನ ಏರ್ಪಡಿಸಬೇಕು. ಸಬ್ಸಿಡಿ ದರದಲ್ಲಿ ದೊರೆಯುವ ಆದುನಿಕ ಕೃಷಿ ಸಲಕರಣೆಗಳ ಬಗ್ಗೆ ಮಾಹಿತಿ ಒದಗಿಸಬೇಕು.

ದಸರಾ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಾರೆ. ಇವರಿಗೆ ಉತ್ತಮ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಎಂದರು.

ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಗಳನ್ನು ಆಯೋಜನೆ, ಕರಕುಶಲ ವಸ್ತುಗಳ ಸ್ಪರ್ಧೆ, ವಿಶಿಷ್ಟ ಕವಿಗೋಷ್ಠಿ ಆಯೋಜನೆ ಮಾಡಬೇಕು, ಆಹಾರ ಮೇಳದಲ್ಲಿ ಸ್ವಚ್ಚತೆಯನ್ನು ಕಾಪಾಡಿ ಕೊಳ್ಳಬೇಕು.

ದಸರಾ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಲಾತಕ ಚಿತ್ರಗಳ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷೀಕಾಂತ ರೆಡ್ಡಿ, ಜಿಪಂ ಸಿಇಒ ಕೆ ಎಂ ಗಾಯತ್ರಿ, ನಗರ ಪೊಲೀಸ್‌‍ ಆಯುಕ್ತರಾದ ಸೀಮಾ ಲಾಟ್ಕರ್‌, ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ವಿಷ್ಣುವರ್ಧನ್‌, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಹಾಗೂ ಉಪಸಮಿತಿಗಳ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

Latest News