ಬೆಂಗಳೂರು,ಜ.11- ಕೌಟುಂಬಿಕ ಕಲಹದಿಂದ ಮನನೊಂದಿದ್ದ ದಾವಣಗೆರೆ ಮಹಾನಗರಪಾಲಿಕೆಯ ಮಾಜಿ ಸದಸ್ಯಹಾಗೂ ಬಿಜೆಪಿ ಮುಖಂಡರೊಬ್ಬರು ತಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಂದ್ರಶೇಖರ್ ಸಂಕೋಲ್(52) ಆತಹತ್ಯೆ ಮಾಡಿಕೊಂಡ ಪಾಲಿಕೆ ಮಾಜಿ ಸದಸ್ಯ. ದಾವಣಗೆರೆಯ ವಿದ್ಯಾನಗರದಲ್ಲಿರುವ ಅವರ ಮನೆಯಲ್ಲಿ ರಾತ್ರಿ ಊಟ ಮುಗಿಸಿ, ಮನೆಯಿಂದ ಕಾರಿನಲ್ಲಿ ನಾಗನೂರು ಸಮೀಪದ ತಮ ತೋಟದ ಬಳಿಗೆ ಹೋಗಿದ್ದಾರೆ.
ರಾತ್ರಿ 10.30ರ ಸಮಯದಲ್ಲಿ ಅವರು ಕಾರಿನಲ್ಲೇ ಕುಳಿತು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಅವರ ಮಕ್ಕಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬ ಮಾಹಿತಿ ಇದ್ದು ಇದರಿಂದ ಮನನೊಂದ್ದಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
