ಬೆಂಗಳೂರು,ಸೆ.9- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿದೆ.
ನಟ ದರ್ಶನ್, ಪವಿತ್ರಗೌಡ ಸೇರಿದಂತೆ 17 ಆರೋಪಿಗಳನ್ನು ಪ್ರತ್ಯೇಕ ಜೈಲಿನಿಂದ ವಿಡಿಯೋ ಕಾನ್ಫರೆನ್‌್ಸ ಮೂಲಕ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿಯನ್ನು 3 ದಿನಗಳ ಕಾಲ (ಸೆ.12) ವಿಸ್ತರಿಸಿದೆ.
ಇಂದಿನ ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಹಾರ್ಡ್ಡಿಸ್ಕ್, ಪೆನ್ಡ್ರೈವ್ ಸೇರಿದಂತೆ 60ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಲ್ಲಿಸಿದರು. 2 ವಾರದಲ್ಲಿ ಡಿಜಿಟಲ್ ಸಾಕ್ಷ್ಯಗಳನ್ನು ಸಲ್ಲಿಸುವುದಾಗಿ ಕೋರ್ಟ್ಗೆ ಮಾಹಿತಿ ನೀಡಿದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಗಳಿಗೆ ಮೂರು ದಿನಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿತು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗ್ಯಾಂಗ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ದರ್ಶನ್ ಸೇರಿದಂತೆ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದರು. ಇಂದಿಗೆ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಈಗಾಗಲೇ 3 ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್, 12 ದಿನಗಳ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರನ್ನು ಬಳ್ಳಾರಿಜೈಲಿಗೆ ವರ್ಗಾವಣೆ ಮಾಡ