Thursday, September 19, 2024
Homeಜಿಲ್ಲಾ ಸುದ್ದಿಗಳು | District Newsಸುರತ್ಕಲ್‌ : ಮಸೀದಿ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

ಸುರತ್ಕಲ್‌ : ಮಸೀದಿ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

Stone pelting-on-mosque-in-katipalla-near-suratkal-mangalore

ಮಂಗಳೂರು: ಸುರತ್ಕಲ್‌ ಬಳಿಯ ಕಾಟಿಪಳ್ಳದಲ್ಲಿ ಕಳೆದ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್‌ ನ ಬದ್ರಿಯಾ ಬಳಿ ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿಯಾಗಿದೆ. ಈದ್‌ ಮಿಲಾದ್‌ ಮುನ್ನಾ ದಿನವೇ ಘಟನೆ ನಡೆದಿದ್ದು, ಪರಿಸ್ಥಿತಿ ಸ್ಥಳದಲ್ಲಿ ಉದ್ವಿಗ್ನವಾಗಿದೆ.

ರಾತ್ರಿ 10.30ರ ಸುಮಾರಿಗೆ 2 ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಗೆ ಸದ್ಯ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಕಲ್ಪಿಸಲಾಗಿದೆ.

ಉದೇಶಪೂರ್ವಕವಾಗಿ ಈ ಕೃತ್ಯ ಎಸಗಲಾಗಿದೆ ಎಂಬ ಮಾತು ಕೇಳಿಬರುತ್ತಿದೆ .ಪೊಲೀಸರು ಸ್ಥಳೀಯ ಸಿಸಿಟಿವಿ ಪರಿಶೀಲಿಸುತ್ತಿದ್ದು ,ತನಿಖೆ ಮುಂದುವರೆದಿದೆ.ಪಕ್ಕದ ಮನೆ ಮೇಲೆ ಕಲ್ಲು ಎಸೆಯಲು ಹೋಗಿ ಅದು ಪ್ರಾರ್ಥನಾ ಮಂದಿರದ ಕಿಟಕಿಗೆ ಬಿದ್ದಿದೆ.

RELATED ARTICLES

Latest News