Friday, November 22, 2024
Homeರಾಜಕೀಯ | Politicsಅಮೆರಿಕದಲ್ಲಿ ರಾಹುಲ್‌ ಗಾಂಧಿ ಭೇಟಿಗೆ ಯಾರ ಅನುಮತಿ ಕೇಳಬೇಕಿತ್ತು..? : ಡಿಕೆಶಿ

ಅಮೆರಿಕದಲ್ಲಿ ರಾಹುಲ್‌ ಗಾಂಧಿ ಭೇಟಿಗೆ ಯಾರ ಅನುಮತಿ ಕೇಳಬೇಕಿತ್ತು..? : ಡಿಕೆಶಿ

Who should have asked permission to visit Rahul Gandhi in America..? : DK

ಬೆಂಗಳೂರು,ಸೆ.17- ಅಮೆರಿಕದಲ್ಲಿ ರಾಹುಲ್‌ ಗಾಂಧಿ ಅವರ ಭೇಟಿ ಮಾಡಲು ಯಾರ ಅನುಮತಿಯನ್ನು ಕೇಳಬೇಕಿತ್ತು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

ಅಮೇರಿಕ ಪ್ರವಾಸದಿಂದ ಮರಳಿದ ನಂತರ ಇಂದು ಮುಂಜಾನೆ ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ ಪಕ್ಷದ ನಾಯಕರನ್ನು ಭೇಟಿಯಾಗಲು ಯಾರ ಅನುಮತಿ ಕೇಳಬೇಕು? ರಾಹುಲ್‌ ಗಾಂಧಿ ಅವರ ಬಳಿ ಏನು ಮಾತನಾಡಿದೆ ಎಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ಪ್ರಕರಣದ ಬಗ್ಗೆ ಪ್ರಶ್ನಿಸಿದಾಗ, ಸರ್ಕಾರ, ಪೊಲೀಸ್‌‍ ಇಲಾಖೆಯು ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೊ ಅದನ್ನು ಮಾಡುತ್ತದೆ ಎಂದು ಹೇಳಿದರು.

ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ಅವರು ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್‌ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು ಎಂದರು.

ಶಾಸಕ ಮುನಿರತ್ನ ಅವರ ಹೇಳಿಕೆಗಳ ಬಗ್ಗೆ ಬಿಜೆಪಿಯಲ್ಲಿರುವ ದೊಡ್ಡ ದೊಡ್ಡ ನಾಯಕರೇ ಪ್ರತಿಕ್ರಿಯೆ ನೀಡಬೇಕು. ಮುನಿರತ್ನ ಮಾತನಾಡಿರುವುದು ಸರಿಯೋ ತಪ್ಪೋ? ಒಳ್ಳೆಯದೋ, ಕೆಟ್ಟದ್ದೋ ಎಂಬುದನ್ನು ತಿಳಿಸಬೇಕು. ಸರಿಯಿದ್ದರೆ ಸರಿ, ತಪ್ಪಿದ್ದರೆ ತಪ್ಪು ಎಂದು ಹೇಳಬೇಕು ಎಂದರು.

ಪೊಲೀಸರ ಬಂಧನಕ್ಕೆ ಮುಂಚಿತವಾಗಿ ನನ್ನ ವಿಚಾರದಲ್ಲಿ ಅಣ್ಣ- ತಮಂದಿರ ಆಟ ಶುರುವಾಗಿದೆ ಎನ್ನುವ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ, ನನಗೆ ಈ ವಿಚಾರ ಗೊತ್ತೇ ಇಲ್ಲ, ತಿಳಿದು ಮಾತಾಡುತ್ತೇನೆ. ನನಗೆ ಇನ್ನು ಸರಿಯಾಗಿ ಮಾಹಿತಿ ಗೊತ್ತಿಲ್ಲ. ಸಾಂವಿಧಾನಿಕ ಹ್ದುೆ ಹೊಂದಿರುವ ಆರ್‌.ಅಶೋಕ್‌, ವಿಜಯೇಂದ್ರ, ಕೇಂದ್ರ ಸಚಿವರು ಇದ್ದಾರೆ. ಅವರು ದೊಡ್ಡ ನಾಯಕರಿದ್ದಾರೆ. ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕು ಎಂದರು.

RELATED ARTICLES

Latest News