ನವದೆಹಲಿ, ಸೆ.18 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಜನತೆ ಅದರಲ್ಲೂ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ಅರ್ಟಿಕಲ್ 370 ರದ್ದುಗೊಂಡ ನಂತರ ಇದೇ ಮೊದಲ ಬಾರಿಗೆ ಜಮು-ಕಾಶೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಕಣಿವೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ನಾನು ವಿನಂತಿಸುತ್ತೇನೆ ಎಂದು ಮೋದಿ ಎಕ್‌್ಸನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾನು ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತದಾರರಿಗೆ ತಮ ಹಕ್ಕು ಚಲಾಯಿಸಲು ಕರೆ ನೀಡುತ್ತೇನೆ ಎಂದು ಅವರು ಹೇಳಿದರು. ಮೂರು ಹಂತದ ಚುನಾವಣೆಯ ಮೊದಲ ಹಂತದಲ್ಲಿ, ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಜಮು ಮತ್ತು ಕಾಶೀರದ ಏಳು ಜಿಲ್ಲೆಗಳು ತಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತದಾನ ಮಾಡುತ್ತಿವೆ.
ಜಮು ಪ್ರದೇಶದ ಮೂರು ಜಿಲ್ಲೆಗಳಲ್ಲಿ ಎಂಟು ಮತ್ತು ಕಾಶೀರ ಕಣಿವೆಯ ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುತ್ತಿರುವ 90 ಸ್ವತಂತ್ರರು ಸೇರಿದಂತೆ 219 ಅಭ್ಯರ್ಥಿಗಳ ಭವಿಷ್ಯವನ್ನು 23 ಲಕ್ಷಕ್ಕೂ ಹೆಚ್ಚು ಮತದಾರರು ನಿರ್ಧರಿಸುತ್ತಾರೆ.ಇನ್ನೆರಡು ಹಂತಗಳು ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ನಡೆಯಲಿದ್ದು, ಮತಗಳ ಎಣಿಕೆ ಅಕ್ಟೋಬರ್ 8 ರಂದು ನಡೆಯಲಿದೆ.