Monday, November 25, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-09-2024)

Today's Horoscope - 19-09-2024

ನಿತ್ಯ ನೀತಿ : ಹೆತ್ತವರನ್ನು ಆಶ್ರಮದಲ್ಲಿ ಬಿಟ್ಟು ಸಾಕುನಾಯಿಗೆ ಬಿರಿಯಾನಿ ಹಾಕುವ ಶ್ರೀಮಂತರಿಗಿಂತ, ಹೆತ್ತವರಿಗೆ ಗಂಜಿ ಊಟ ಹಾಕುವ ಬಡವನು ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿ.

ಪಂಚಾಂಗ : ಗುರುವಾರ, 19-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಉತ್ತರಾಭಾದ್ರ / ಯೋಗ: ವೃದ್ಧಿ / ಕರಣ: ತೈತಿಲ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.18
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ವೃಷಭ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ಮಿಥುನ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.

ಕಟಕ: ಹಣಕಾಸಿನ ತೊಂದರೆ ಎದುರಾಗಲಿದೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.

ತುಲಾ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.

ಮಕರ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಕುಂಭ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

RELATED ARTICLES

Latest News