Monday, November 25, 2024
Homeರಾಷ್ಟ್ರೀಯ | NationalBIG NEWS : ಮಾಜಿ ಸಿಎಂ ಯಡಿಯೂರಪ್ಪಗೆ Z ಕೆಟಗರಿ ಭದ್ರತೆ

BIG NEWS : ಮಾಜಿ ಸಿಎಂ ಯಡಿಯೂರಪ್ಪಗೆ Z ಕೆಟಗರಿ ಭದ್ರತೆ

ನವದೆಹಲಿ,ಅ.27- ಕೆಲವು ಸಮಾಜಘಾತುಕ ಶಕ್ತಿಗಳಿಂದ ಜೀವಬೆದರಿಕೆ ಇರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ಒದಗಿಸಿದೆ. ಕೇಂದ್ರ ಗುಪ್ತಚರ ವಿಭಾಗವು ಕರ್ನಾಟಕದ ಬಿಜೆಪಿ ಹಿರಿಯ ನಾಯಕರಾಗಿರುವ ಯಡಿಯೂರಪ್ಪನವರಿಗೆ ಕೆಲವು ದುಷ್ಕರ್ಮಿಗಳಿಂದ ಪ್ರಾಣ ಬೆದರಿಕೆ ಇದೆ ಎಂದು ವರದಿ ನೀಡಿದ್ದರ ಹಿನ್ನಲೆಯಲ್ಲಿ ಝೆಡ್ ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ.

ಅತಿ ಗಣ್ಯ ವ್ಯಕ್ತಿಗಳಿಗೆ ಮಾತ್ರ ಗರಿಷ್ಠ ಭದ್ರತೆ ಇರುವ ಝೆಡ್ ಕೆಟಗರಿ ಭದ್ರತೆಯನ್ನು ಪಡೆದ ರಾಜ್ಯದ ಏಕಮಾತ್ರ ರಾಜಕಾರಣಿ ಎಂಬ ಹೆಗ್ಗಳಿಕೆಯು ಬಿಎಸ್‍ವೈ ಅವರಿಗೆ ಸಲ್ಲುತ್ತದೆ. ಯಡಿಯೂರಪ್ಪ ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೇಂದ್ರ ಗೃಹ ಸಚಿವಾಲಯ ಕೈಗೊಂಡಿದೆ.

ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಮನೆ ಸೇರಿದಂತೆ ಹಲವೆಡೆ ಇಡಿ ದಾಳಿ

ಕೆಲವು ಮೂಲಭೂತವಾದಿ ಸಂಘಟನೆಗಳಿಂದ ಯಡಿಯೂರಪ್ಪನವರಿಗೆ ಸಂಭಾವ್ಯ ದಾಳಿ ನಡೆಯಬಹುದು ಎಂಬ ಹಿನ್ನಲೆಯಲ್ಲಿ ಗುಪ್ತಚರ ವಿಭಾಗದ ಶಿಫಾರಸ್ಸಿನಂತೆ ಗೃಹ ಝೆಡ್ ಕೆಟಗರಿ ಭದ್ರತೆಯನ್ನು ಒದಗಿಸಿದೆ. ಗೃಹ ಇಲಾಖೆ ನಿರ್ದೇಶನದಂತೆ ಯಡಿಯೂರಪ್ಪ ಅವರಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಕೇಂದ್ರ ಮೀಸಲು ಪೊಲೀಸ್ ಪಡೆ ಕಮಾಂಡೋಗಳು ಭದ್ರತೆ ಒದಗಿಸುತ್ತಾರೆ.

ಯಡಿಯೂರಪ್ಪ ಅವರ ಭದ್ರತೆಗೆ ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ 10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್‍ಗಳನ್ನು ಅವರ ನಿವಾಸದಲ್ಲಿ ಇರಿಸಲಾಗುವುದು, ಅವರಿಗೆ ಪೂರಕವಾಗಿ ಆರು ವೈಯಕ್ತಿಕ ಭದ್ರತಾ ಅಧಿಕಾರಿಗಳು ದಿನದ 24 ಗಂಟೆ ಕಾಯುತ್ತಿರುತ್ತಾರೆ.

ಸಂಭಾವ್ಯ ಬೆದರಿಕೆಗಳ ವಿರುದ್ಧ ನಿರಂತರ ಜಾಗ್ರತೆ ವಹಿಸಲು 12 ಸಶಸ್ತ್ರ ಬೆಂಗಾವಲು ಕಮಾಂಡೋಗಳನ್ನು ಮೂರು ಪಾಳಿಗಳಲ್ಲಿ ನಿಯೋಜಿಸಲಾಗುತ್ತಿದೆ. ನಿರಂತರ ಕಣ್ಗಾವಲು ಕಾಯ್ದುಕೊಳ್ಳಲು, ಇಬ್ಬರು ವೀಕ್ಷಕರನ್ನು ಶಿಫ್ಟ್‍ಗಳಲ್ಲಿ ನಿಯೋಜಿಸಲಾಗುವುದು, ಒಟ್ಟಾರೆ ಭದ್ರತಾ ಚೌಕಟ್ಟನ್ನು ಇನ್ನಷ್ಟು ಹೆಚ್ಚಿಸಲಾಗುತ್ತದೆ. ಈ ಕ್ರಮಗಳ ಜೊತೆಗೆ, ಯಡಿಯೂರಪ್ಪನವರು ಮೂರು ತರಬೇತಿ ಪಡೆದ ಚಾಲಕರನ್ನು ಹೊಂದಿರುತ್ತಾರೆ.

RELATED ARTICLES

Latest News