ನವದೆಹಲಿ,ಸೆ.23– ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆಗಳು ಏಕಕಾಲದಲ್ಲಿ ನಡೆಯುವ ಸಾಧ್ಯತೆಯಿದೆ. ಚುನಾವಣಾ ಆಯೋಗವು ಮುಂದಿನ ವಾರ ಈ ಎರಡೂ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಲಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ ಆಯೋಗವು ಸೆಪ್ಟೆಂಬರ್ 23-24 ರಂದು ಜಾರ್ಖಂಡ್‌ನಲ್ಲಿ ಮತ್ತು ಸೆಪ್ಟೆಂಬರ್ 27-28 ರಂದು ಮಹಾರಾಷ್ಟ್ರದಲ್ಲಿದೆ ಪರಿಶೀಲನೆ ನಡೆಸಲಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ನಡೆದ ಚುನಾವಣಾ ಸಮಯದಲ್ಲಿ ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದವು. ಆದರೆ ಈ ಬಾರಿ ಚುನಾವಣಾ ಆಯೋಗ ಈ ಎರಡು ರಾಜ್ಯಗಳ ಚುನಾವಣೆಯನ್ನು ಪ್ರತ್ಯೇಕಿಸಿದೆ.
ಕಳೆದ ಬಾರಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯನ್ನು ಸ್ವತಂತ್ರವಾಗಿ ನಡೆಸಲಾಗಿತ್ತು. ಆದರೆ ಇದೀಗ ಮಹಾರಾಷ್ಟ್ರ ಜಾರ್ಖಂಡ್‌ನಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಮತ್ತೊಂದೆಡೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯು ನವೆಂಬರ್ 26ರಂದು ಮುಗಿಯಲಿದೆ. ಆದರೆ ಜಾರ್ಖಂಡ್‌ನಲ್ಲಿ ಜನವರಿ 5ರಂದು ಮುಕ್ತಾಯವಾಗಲಿದೆ ಎಂಬ ಮಾತುಗಳು ಕೇಳಿಬರುತ್ತುವೆ.ಈಗಾಗಲೇ ಜಮುಕಾಶೀರದಲ್ಲಿ ಚುನಾವಣೆಗಳು ನಡೆಯುತ್ತಿದ್ದು, ಹರಿಯಾಣದಲ್ಲಿ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಇನ್ನು ನವದೆಹಲಿಯ ವಿಧಾನಸಭಾ ಚುನಾವಣೆ ಫೆಬ್ರವರಿಯಲ್ಲಿ ನಡೆಯುವ ನಿರೀಕ್ಷೆಯಿದೆ.