Sunday, September 29, 2024
Homeರಾಷ್ಟ್ರೀಯ | Nationalಮುಂಬೈನಲ್ಲಿ ಮತ್ತೆ ಉಗ್ರರ ದಾಳಿ ಸಾಧ್ಯತೆ, ಗುಪ್ತಚರ ಸಂಸ್ಥೆಗಳ ಎಚ್ಚರಿಕೆ

ಮುಂಬೈನಲ್ಲಿ ಮತ್ತೆ ಉಗ್ರರ ದಾಳಿ ಸಾಧ್ಯತೆ, ಗುಪ್ತಚರ ಸಂಸ್ಥೆಗಳ ಎಚ್ಚರಿಕೆ

IB warning puts city on alert; police monitor religious places

ಮುಂಬೈ,ಸೆ.28- ವಾಣಿಜ್ಯ ರಾಜಧಾನಿ ಮೇಲೆ ಮತ್ತೆ ಉಗ್ರರು ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಕೇಂದ್ರ ತನಿಖಾ ಸಂಸ್ಥೆಗಳು ಎಚ್ಚರಿಕೆ ನೀಡಿವೆ.ಭಯೋತ್ಪಾದನಾ ಬೆದರಿಕೆಯ ಕುರಿತು ಕೇಂದ್ರ ಏಜೆನ್ಸಿಗಳು ಎಚ್ಚರಿಕೆ ನೀಡಿದ ನಂತರ ಮುಂಬೈ ಪೊಲೀಸರು ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಪೊಲೀಸ್‌‍ ಮೂಲಗಳ ಪ್ರಕಾರ, ಮುಂಬೈನ ಅನೇಕ ಧಾರ್ಮಿಕ ಸ್ಥಳಗಳು ಮತ್ತು ಇತರ ಜನನಿಬಿಡ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ.ಧಾರ್ಮಿಕ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ ಮಾಕ್‌ ಡ್ರಿಲ್‌‍ ನಡೆಸಲು ಪೊಲೀಸ್‌‍ ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಗರದ ಡಿಸಿಪಿಗಳು (ಡೆಪ್ಯುಟಿ ಕಮಿಷನರ್‌ ಆಫ್‌ ಪೊಲೀಸ್‌‍) ತಮ ತಮ ವಲಯಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಕೇಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ನಗರದ ದೇವಸ್ಥಾನಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೇಗುಲದ ಭದ್ರತೆಯನ್ನು ಹೆಚ್ಚಿಸಲು ಮುಂಬೈ ಪೊಲೀಸರು ನಮನ್ನು ಕೇಳಿದ್ದಾರೆ. ಎಲ್ಲಾ ಭದ್ರತಾ ವ್ಯವಸ್ಥೆಗಳ ಬಗ್ಗೆ ಗಮನ ಹರಿಸಲು ನಮಗೆ ತಿಳಿಸಲಾಗಿದೆ ಎಂದು ಸಿದ್ಧಿವಿನಾಯಕ ದೇವಸ್ಥಾನದ ಟ್ರಸ್ಟ್‌ನ ಅಧ್ಯಕ್ಷ ಸದಾ ಸರ್ವಾಂಕರ್‌ ತಿಳಿಸಿದ್ದಾರೆ.

ಎರಡು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ಜನನಿಬಿಡ ಕ್ರಾಫರ್ಡ್‌ ಮಾರುಕಟ್ಟೆ ಪ್ರದೇಶದಲ್ಲಿ ಶುಕ್ರವಾರ ಪೊಲೀಸರು ಅಣಕು ಡ್ರಿಲ್‌ ನಡೆಸಿದರು. ಆದರೆ, ಇದು ಹಬ್ಬ ಹರಿದಿನಗಳ ಮುನ್ನಾ ಭದ್ರತಾ ಕಸರತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ತಿಂಗಳ 10 ದಿನಗಳ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಿದ ಮುಂಬೈ ಈಗ ದುರ್ಗಾಪೂಜೆ, ದಸರಾ ಮತ್ತು ದೀಪಾವಳಿಗೆ ತಯಾರಿ ನಡೆಸುತ್ತಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ರಾಜ್ಯ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

RELATED ARTICLES

Latest News