ನವದೆಹಲಿ, ಅ.2 (ಪಿಟಿಐ) ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನ ಮಂತ್ರಿ ನರೆಂದ್ರ ಮೋದಿ, ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಪ್ರಮುಖರು ಇಂದು ರಾಷ್ಟ್ರಪೀತ ಮಹಾತ ಗಾಂಧಿ ಮತ್ತು ದೇಶದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ನಮನ ಸಲ್ಲಿಸಿದ್ದಾರೆ.
ದೇಶದ ಎಲ್ಲ ನಾಗರಿಕರ ಪರವಾಗಿ, ರಾಷ್ಟ್ರಪಿತ ಮಹಾತ ಗಾಂಧಿ ಅವರ 155 ನೇ ಜನ್ಮ್ ದಿನದಂದು ನಾನು ಅವರಿಗೆ ನನ್ನ ನಮ್ರ ಗೌರವವನ್ನು ಸಲ್ಲಿಸುತ್ತೇನೆ ಎಂದು ಮುರ್ಮು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.ಮತ್ತೊಂದು ಪೋಸ್ಟ್‌ನಲ್ಲಿ, ಶಾಸ್ತ್ರಿ ಅವರು ತಮ ಜೀವನದುದ್ದಕ್ಕೂ ಸರಳತೆ, ಪ್ರಾಮಾಣಿಕತೆ ಮತ್ತು ದೇಶಭಕ್ತಿಯ ಅತ್ಯುನ್ನತ ಆದರ್ಶಗಳನ್ನು ಪ್ರಸ್ತುತಪಡಿಸಿದ್ದಾರೆ ಎಂದು ಅವರು ಹೇಳಿಕೊಂಡಿದ್ಧಾರೆ.
ಎಕ್‌್ಸನಲ್ಲಿ ಮೋದಿ ಅವರು ಪೂಜ್ಯ ಬಾಪು ಅವರ ಜೀವನ ಮತ್ತು ಸತ್ಯ, ಸಾಮರಸ್ಯ ಮತ್ತು ಸಮಾನತೆಯ ಆಧಾರದ ಮೇಲೆ ಆದರ್ಶಗಳು ಯಾವಾಗಲೂ ದೇಶದ ಜನರಿಗೆ ಸ್ಫೂರ್ತಿ ಎಂದು ಹೇಳಿದ್ದಾರೆ. ಇದೇ ದಿನದಂದು ಜನಿಸಿದ ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೂ ಮೋದಿ ನಮನ ಸಲ್ಲಿಸಿದ್ದಾರೆ.
ಶಾಸ್ತ್ರೀ ತಮ ಜೀವನವನ್ನು ದೇಶದ ಸೈನಿಕರು, ರೈತರು ಮತ್ತು ಹೆಮೆಗಾಗಿ ಮುಡಿಪಾಗಿಟ್ಟರು, ಜೈ ಜವಾನ್, ಜೈ ಕಿಸಾನ್ ಘೋಷಣೆಯನ್ನು ಎತ್ತಿದ ಶಾಸ್ತ್ರಿಯವರ ಬಗ್ಗೆ ಮೋದಿ ಹೇಳಿದರು ಮತ್ತು ಅವರ ಸರಳತೆ ಮತ್ತು ಪ್ರಾಮಾಣಿಕತೆ ಅವರಿಗೆ ವ್ಯಾಪಕ ಗೌರವವನ್ನು ತಂದುಕೊಟ್ಟಿದೆ ಎಂದಿದ್ದಾರೆ.
ಪ್ರಧಾನಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಇತರ ಹಲವಾರು ಗಣ್ಯರೊಂದಿಗೆ ಇಂದು ಬೆಳಿಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಗಾಂಧಿ ಮತ್ತು ಶಾಸ್ತ್ರಿ ಅವರ ಸಾರಕಗಳಿಗೆ ಭೇಟಿ ನೀಡಿ ಅವರಿಗೆ ಗೌರವ ಸಲ್ಲಿಸಿದರು.
ನಂತರ, ಮೋದಿ ಅವರು ತಮ ಜೀವನದುದ್ದಕ್ಕೂ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿದ ಗಾಂಧಿಯವರ ಜನದಿನದಂದು 2014 ರಲ್ಲಿ ಪ್ರಾರಂಭಿಸಲಾದ ಸ್ವಚ್ಛತಾ ಭಾರತ ಅಭಿಯಾನದ 10 ನೇ ವಾರ್ಷಿಕೋತ್ಸವದ ಅಂಗವಾಗಿ ಕೆಲವು ಶಾಲಾ ವಿದ್ಯಾರ್ಥಿಗಳೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು.
ಅದೇ ರೀತಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಡ್ಡಾ, ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರರ ಮಹನೀಯರು ದೇಶದ ಮಹಾನ್ ನಾಯಕರಿಗೆ ಗೌರವ ಸಲ್ಲಿಸಿದ್ದಾರೆ.