Wednesday, January 14, 2026
Homeಜಿಲ್ಲಾ ಸುದ್ದಿಗಳುಬಾಗಲಕೋಟೆ : ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು

ಬಾಗಲಕೋಟೆ : ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು

Bagalkot: Girl seriously injured in stray dog ​​attack dies

ಬಾಗಲಕೋಟೆ,ಜ.14-ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾಳೆ. ನವನಗರದ ನಿವಾಸಿ ಅಲೈನಾ ಲೋಕಾಪುರ (10) ಮೃತಪಟ್ಟ ಬಾಲಕಿ.

ಡಿ.27 ರಂದು ಅಲೈನಾ ನಡೆದು ಹೋಗುತ್ತಿದ್ದಾಗ ಬೀದಿ ನಾಯಿಯೊಂದು ಏಕಾಏಕಿ ದಾಳಿ ಮಾಡಿ ದೇಹದ ವಿವಿಧ ಭಾಗಗಳಿಗೆ ಕಚ್ಚಿದೆ. ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ.

RELATED ARTICLES

Latest News