Wednesday, November 27, 2024
Homeರಾಜ್ಯಕನಕಪುರವನ್ನು ಬೆಂಗಳೂರಿಗೆ ವಿಚಾರ ಖಂಡಿಸಿದ ಅಶ್ವಥ್ ನಾರಾಯಣ್

ಕನಕಪುರವನ್ನು ಬೆಂಗಳೂರಿಗೆ ವಿಚಾರ ಖಂಡಿಸಿದ ಅಶ್ವಥ್ ನಾರಾಯಣ್

ಬೆಂಗಳೂರು, ಅ.26- ಬೆಂಗಳೂರಿಗೆ ಕನಕಪುರವನ್ನು ಸೇರಿಸುವ ಡಿ.ಕೆ.ಶಿವಕುಮಾರ್ ಚಿಂತನೆಯನ್ನು ಮಾಜಿ ಸಚಿವ ಸಿಎನ್ ಅಶ್ವಥ್ ನಾರಾಯಣ್ ಖಂಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಬೆಂಗಳೂರಿಗೂ ತಮಗೂ ಏನು ಸಂಬಂಧ ಎಂದು ಕೇಳಿದಾಗಲೆಲ್ಲ ಉತ್ತರಿಸಲಾಗದೇ ತಡಬಡಿಸುತ್ತಿದ್ದ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಜೊತೆ ಸಂಬಂಧ ಕಲ್ಪಿಸಿಕೊಳ್ಳಲು ಶಾರ್ಟ್‍ಕಟ್ ಮಾರ್ಗ ಅನುಸರಿಸಿದಂತಿದೆ. ಕನಕಪುರವನ್ನು ಬೆಂಗಳೂರಿಗೆ ಸೇರಿಸಿದರೆ ತಾವು ಬೆಂಗಳೂರಿನವರು ಎಂದು ಹೇಳಿಕೊಳ್ಳಬಹುದು ಎನ್ನುವ ಆಲೋಚನೆ ಅವರದ್ದಾಗಿರಬಹುದು ಎಂದು ಟಾಂಗ್ ನೀಡಿದ್ದಾರೆ.

ರಾಮನಗರಕ್ಕಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡ್ತೀನಿ : ಹೆಚ್‌ಡಿಕೆ

ಕನಕಪುರವನ್ನು ಬೆಂಗಳೂರಿಗೆ ಸೇರಿಸಿದರೆ ಆಸ್ತಿಯ ಮೌಲ್ಯ ಹತ್ತುಪಟ್ಟು ಹೆಚ್ಚಾಗಲಿದೆ ಎನ್ನುವ ಮೂಲಕ ನಿಮ್ಮ ಕೃಷಿ ಭೂಮಿಯನ್ನು ಮಾರಿಕೊಳ್ಳಿ ಎಂದು ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ರೈತರಿಗೆ ಕರೆ ನೀಡಿದ್ದಾರೆ. ಕನಕಪುರವನ್ನು ಕನಕಪುರವಾಗಿ ಅಭಿವೃದ್ಧಿಪಡಿಸಲಾಗದ ಅವರಿಗೆ ಈ ಆಲೋಚನೆ ಬಂದಿರುವುದು ಹಾಸ್ಯಾಸ್ಪದ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬೆಂಗಳೂರಿಂದ ಕನಕಪುರ ಮಾರ್ಗವಾಗಿ ದಿಂಡಿಗಲ್ಲಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗಿತ್ತಿದ್ದು, ಕನಕಪುರದ ಆರ್ಥಿಕ ಚಟುವಟಿಕೆಗೆ ವೇಗ ಸಿಗಲಿದೆ. ಜಲ ಜೀವನ್ ಮಿಷನ್ ಅಡಿ ರಾಮನಗರದ ಮನೆ ಮನೆಗೂ ಕುಡಿಯುವ ನೀರು ಸೌಲಭ್ಯ ಕಲ್ಪಿಸಿದ್ದೇವೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಬೆಂಗಳೂರು ಸ್ಯಾಟಲೈಟ್ ಟೌನ್‍ಶಿಪ್ ರಿಂಗ್ ರೋಡ್ ನಿರ್ಮಾಣವಾಗುತ್ತಿದೆ, ಸಬ್ ಅರ್ಬನ್ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಕನಕಪುರದ ಜನತೆಯ ಜೀವನ ಮಟ್ಟ ಸುಧಾರಿಸಲು ಅಭಿವೃದ್ಧಿಯ ಮಾರ್ಗ ಹಿಡಿಯುವುದನ್ನು ಬಿಟ್ಟು ಈ ರೀತಿಯ ಅಡ್ಡ ಮಾರ್ಗ ಹಿಡಿದರೆ ಕಬ್ಬಾಳಮ್ಮ ಮೆಚ್ಚುವಳೇ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರದ ಅವಯಲ್ಲಿ ಜಿಲ್ಲೆಯ ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಸುಧಾರಣೆಗೆ ಆದ್ಯತೆ ನೀಡಿದ್ದೇವೆ. ಕನಕಪುರವನ್ನು ಬೆಂಗಳೂರಿಗೆ ಸೇರಿಸುವುದರಿಂದ ಭೂಮಿಯ ಮೌಲ್ಯ ಹೆಚ್ಚಾಗುತ್ತದೆ ಎಂಬ ಕಪೋಲ ಕಲ್ಪಿತ ಆಲೋಚನೆಯನ್ನು ಮುಗ್ಧ ಜನರ ತಲೆಯಲ್ಲಿ ತುಂಬಿ ದಿಕ್ಕು ತಪ್ಪಿಸುವ ಕೆಲಸ ಮಾಡಬೇಡಿ. ಬದಲಾಗಿ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಿ ಎಂದು ಸಲಹೆ ನೀಡಿದ್ದಾರೆ.

“ಬಿಜೆಪಿ ನಾಯಕರಿಗೆ ಮಾಡೋಕೆ ಕೆಲಸ ಇಲ್ಲ, ಬಾಯಿ ಚಟಕ್ಕೆ ಮಾತಾಡ್ತಾರೆ”

ಕೆಂಗಲ್ ಹನುಮಂತಯ್ಯ, ಶಿವಕುಮಾರ ಸ್ವಾಮೀಜಿಗಳು, ಬಾಲಗಂಗಾಧರನಾಥ ಸ್ವಾಮೀಜಿಯವರು ಜನಿಸಿದ ಪುಣ್ಯ ಭೂಮಿಯಲ್ಲಿ ಸೇವೆ ಮಾಡುವ ಸದವಕಾಶವನ್ನು ಈ ಭಾಗದ ಜನತೆ ತಮಗೆ ಕಲ್ಪಿಸಿದ್ದಾರೆ. ಆದರೆ, ನಾವು ರಾಮನಗರದವರೇ ಅಲ್ಲ ಎನ್ನುವ ನಿಮ್ಮ ಮಾತನ್ನು ರಾಮದೇವರ ಬೆಟ್ಟದ ಮೇಲಿರುವ ಆ ಶ್ರೀರಾಮಚಂದ್ರ ಮೆಚ್ಚುವನೇ? ಎಂದು ಪ್ರಶ್ನೆ ಹಾಕಿದ್ದಾರೆ.

RELATED ARTICLES

Latest News