Wednesday, January 14, 2026
Homeಬೆಂಗಳೂರುಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟ

ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟ

Election schedule for three urban local bodies announced

ಬೆಂಗಳೂರು, ಜ.14-ಪಂಚಾಯತ್‌ ರಾಜ್‌ ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿಯು ನಗರ ಸ್ಥಳೀಯ ಸಂಸ್ಥೆಗಳಾದ ಹೆಬ್ಬಗೋಡಿ ನಗರಸಭೆ, ಜಿಗಣಿ ಮತ್ತು ಚಂದಾಪುರ ಪುರಸಭೆಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಜನವರಿ 22 ರವರೆಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜನವರಿ 23 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜನವರಿ 27 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮತದಾನವು ಫೆಬ್ರವರಿ 4 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿದೆ. ಅಂದು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಸಂಜೆ 4 ರಿಂದ ಮತಗಳ ಎಣಿಕೆ ಕಾರ್ಯವು ನಡೆಯಲಿದ್ದು, ಬಳಿಕ ಫಲಿತಾಂಶ ಪ್ರಕಟಿಸಲಾಗುತ್ತದೆ.

ಫೆಬ್ರವರಿ 5 ರಂದು ಚುನಾವಣೆಯು ಪೂರ್ಣಗೊಳ್ಳಲಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್‌ ನ ಚುನಾವಣಾ ಅಧಿಕಾರಿಗಳು ಜಿಲ್ಲಾ ಯೋಜನಾ ಸಮಿತಿ ಚುನಾವಣೆ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

RELATED ARTICLES

Latest News