Friday, November 22, 2024
Homeರಾಜಕೀಯ | Politics"ನೌಕಾಪಡೆ ಮಾಜಿ ಅಧಿಕಾರಿಗಳ ಮರಣದಂಡನೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ"

“ನೌಕಾಪಡೆ ಮಾಜಿ ಅಧಿಕಾರಿಗಳ ಮರಣದಂಡನೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ”

ಬೆಂಗಳೂರು,ಅ.27- ಭಾರತದ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯ ಮರಣದಂಡನೆ ಘೋಷಿಸಿರುವುದನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಭಾರತದ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳಿಗೆ ಕತಾರ್ ನ್ಯಾಯಾಲಯ ಗಲ್ಲು ಶಿಕ್ಷೆ ನೀಡಿರುವುದು ಆಘಾತಕಾರಿ ಸುದ್ದಿ. ಆದರೆ ಗೋಪ್ಯತೆಯ ಕಾರಣ ನೀಡಿ ಕೇಂದ್ರ ಸರ್ಕಾರ ಇದೊಂದು ಸಾಮಾನ್ಯ ಪ್ರಕರಣ ಎಂದು ತೇಪೆ ಹಾಕುತ್ತಿದೆ. ಭಾರತದ ನೌಕಪಡೆಯಲ್ಲಿ ಸೇವೆ ಸಲ್ಲಿಸಿದ್ದ ಸಿಬ್ಬಂದಿಗೆ ವಿದೇಶಿ ನ್ಯಾಯಾಲಯ ಮರಣ ದಂಡನೆ ವಿಧಿಸಿರುವುದು ಸಾಮಾನ್ಯ ಪ್ರಕರಣವೆ?

ಭಾರತದ ನೌಕಾಪಡೆಯ ಸಿಬ್ಬಂದಿಗೆ ಕತಾರ್ ನ್ಯಾಯಾಲಯ ನೀಡಿರುವ ಗಲ್ಲು ಶಿಕ್ಷೆಯ ಕುರಿತು ಕೇವಲ ಪ್ರಾಥಮಿಕ ಮಾಹಿತಿಯಿದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. ಇದು ಕೇಂದ್ರ ಸರ್ಕಾರದ ರಾಜತಾಂತ್ರಿಕ ವೈಫಲ್ಯವಲ್ಲವೆ ? ಗಲ್ಲು ಶಿಕ್ಷೆಗೊಳಗಾದ ನೌಕಾಪಡೆಯ ಸಿಬ್ಬಂದಿಗಳು ಕಳೆದ 1 ವರ್ಷದಿಂದ ಕತಾರ್ ಜೈಲಿನಲ್ಲಿದ್ದಾರೆ. ಇಲ್ಲಿಯವರೆಗೂ ಕೇಂದ್ರ ಏನು ಮಾಡುತಿತ್ತು ಎಂದು ಪ್ರಶ್ನಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಗುಣಗಾನ ಮಾಡಿದ ಕಾಂಗ್ರೆಸ್

ನೌಕಾದಳದ 8 ಮಾಜಿ ಅಧಿಕಾರಿಗಳಿಗೆ ಕತಾರ್ ಮರಣ ದಂಡನೆ ವಿಧಿಸಿರುವುದು ಇಡೀ ದೇಶವೇ ಕಳವಳ ಪಡುವ ವಿಚಾರ. ಇಸ್ರೇಲ್-ಪ್ಯಾಲೆಸ್ಟೇನ್ ನಡುವಿನ ಸಂಘರ್ಷದ ಹೊತ್ತಿನಲ್ಲೇ ಈ ತೀರ್ಪು ಬಂದಿರುವುದು ಚಿಂತಿಸಬೇಕಾದ ವಿಚಾರ. ದೇಶಕ್ಕೆ ಸೇವೆ ಸಲ್ಲಿಸಿದವರು ವಿದೇಶಿ ನೆಲದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಈ ಬಗ್ಗೆ ಕೇಂದ್ರ ಸೂಕ್ಷ್ಮವಾಗಿ ವರ್ತಿಸಬೇಕು.

ಕತಾರ್ ನ್ಯಾಯಾಲಯದ ತೀರ್ಪಿನಿಂದ ಗಲ್ಲುಶಿಕ್ಷೆಗೆ ಗುರಿಯಾದ ನೌಕಾದಳದ ಸಿಬ್ಬಂದಿಗಳ ಕುಟುಂಬವಷ್ಟೇ ಅಲ್ಲ, ಇಡೀ ದೇಶವೇ ಆತಂಕಕ್ಕೀಡಾಗಿದೆ. ಕೇಂದ್ರ ಸರ್ಕಾರ ಗೋಪ್ಯತೆಯ ಸಬೂಬು ಹೇಳಿ ಕೈ ಚೆಲ್ಲಿ ಕುಳಿತರೆ ದೇಶಕ್ಕೆ ಸೇವೆ ಸಲ್ಲಿಸಿದವರನ್ನು ನಾವೇ ಸ್ವತಃ ಕೈಯ್ಯಾರೆ ಬಲಿ ಕೊಟ್ಟಂತಾಗುತ್ತದೆ. ಹಾಗಾಗಿ ಕೇಂದ್ರ ಈ ಪ್ರಕರಣದ ಸೂಕ್ಷ್ಮತೆ ಅರಿತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

Latest News