ಬೆಂಗಳೂರು,ಅ.15- ಅವನು ನಿಜವಾಗಿ ಅವರಪ್ಪನಿಗೆ ಹುಟ್ಟಿರುವುದು ನಿಜವಾಗಿದ್ದರೆ ನನ್ನ ಮೇಲಿನ ಸಿ.ಡಿಯನ್ನು ಬಿಡುಗಡೆ ಮಾಡಲಿ ಎಂದು ಕಟ್ಟಾ ಹಿಂದುತ್ವವಾದಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗ ಸವಾಲು ಹಾಕಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಮ್ಮನಿರದಿದ್ದರೆ ಅವರ ಸಿಡಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ವಿಜಾಪುರದ ಹೆಚ್ಚುವರಿ ಜಿಲ್ಲಾ ಸರ್ಕಾರಿ ಅಭಿಯೋಜಕ ಎಸ್.ಎಸ್.ಖಾದ್ರಿ ಮತ್ತು ಮುಸ್ಲಿಂ ಮುಖಂಡರು ಹೇಳಿದ್ದರು. ಎಕ್ಸ್‌ನಲ್ಲಿ ಇದಕ್ಕೆ ತಿರುಗೇಟು ನೀಡಿರುವ ಯತ್ನಾಳ್, ಖಾದ್ರಿ ಎಂಬ ಒಬ್ಬ ವಕ್ ಆಸ್ತಿ ಲೂಟಿಕೋರ, ಹಿಂದೆ ಜಿಲ್ಲೆಯಿಂದ ಗಡೀಪಾರಾಗಿದ್ದವನು, ನಾವು ವಕ್ ಆಸ್ತಿಯ ಲೂಟಿಯ ಬಗ್ಗೆ ಪ್ರತಿಭಟನೆಗೆ ಮುಂದಾಗಿರುವಾಗ ನನ್ನ ಸಿ.ಡಿ ಬಿಡುಗಡೆ ಮಾಡುತ್ತೀನಿ ಎಂದು ಹೇಳಿರುವುದನ್ನು ನಾನು ಗಮನಿಸಿದ್ದೇನೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಹಿಂದೆಯೂ ನಾನು ಹೇಳಿದ್ದೆ ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಬಿಡುಗಡೆ ಮಾಡಲಿ ಎಂದು, ಈಗ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ಇಂತಹ ಅಯೋಗ್ಯರ ಹೇಳಿಕೆಗಳನ್ನು ಕೆಲ ಮಾಧ್ಯಮಗಳು ವೈಭವೀಕರಿಸುತ್ತಿರುವುದನ್ನೂ ಗಮನಿಸಿದ್ದೇನೆ. ಈಗಾಗಲೇ ಮಾನಹಾನಿ ಪ್ರಕರಣದ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜಕಾರಣ ಮಾಡಬೇಕು. ಇಲ್ಲದಿದ್ದರೇ ನವೆಂಬರ್ 6ರಂದು ಸಿಡಿ ಬಿಡುಗಡೆ ಮಾಡುವುದು ಗ್ಯಾರೆಂಟಿ ಎಂದು ವಿಜಯಪುರ ಎಸ್‌ಎಸ್ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ಎಚ್ಚರಿಕೆ ನೀಡಿದ್ದರು.
ವಿಜಯಪುರ ಜಿಲ್ಲೆಯ 12000 ಎಕರೆ, ವಿಜಯಪುರ ತಾಲೂಕಿನ 2643 ಎಕರೆ ವಕ ಆಸ್ತಿ ಎಂದು ನೋಂದಣಿ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಆದೇಶಿಸಿದ್ದಾರೆ. ಸಂಘ-ಸAಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನೋಂದಣಿ ಮಾಡುವುದನ್ನು ಕೈಬಿಡುವಂತೆ ಒತ್ತಾಯಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಭಟನೆಗೆ ಕರೆ ಕೊಟ್ಟಿದ್ದರು.
ಅದರಂತೆ ಇಂದು ಸಿದ್ದೇಶ್ವರ ದೇವಸ್ಥಾನದ ಬಳಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಬಿಜೆಪಿ ನಾಯಕ ಸಿಟಿ ರವಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗಿಯಾಗಲಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದ ಪ್ರತಿಭಟನೆಗೆ ಎಸ್‌ಎಸ್ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು.