ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯ ಲ್ಯಾಂಡ್ ಲಾರ್ಡ್ ಸಿನಿಮಾ ರಿಲೀಸ್‌ಗೂ ಮುನ್ನವೇ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಅದರಲ್ಲೂ ಹಾಡುಗಳಿಂದಾನೇ ಸಿನಿಪ್ರೇಮಿಗಳ ಮನಸ್ಸು ಗೆಲ್ಲುತ್ತಿದೆ. ನಿಂಗವ್ವ ನಿಂಗವ್ವ ಸಾಂಗ್ ಕಿವಿಯಲ್ಲಿ ಗುನುಗುತ್ತಿರುವಾಗಲೇ ರೋಮಾಂಚಕ ಹಾಡನ್ನ ರಿಲೀಸ್ ಮಾಡಲಾಗಿದೆ. ನಿಂಗವ್ವದಲ್ಲಿ ಅಪ್ಪ ಅಮನ ಲವ್ ಸ್ಟೋರಿ ಕಂಡ್ರೆ, ರೋಮಾಂಚಕದಲ್ಲಿ ಮಗಳ ಲವ್ ಸ್ಟೋರಿ ಕಿಕ್ಕೇರಿಸುತ್ತಿದೆ. ಈ ಹಾಡು ಲ್ಯಾಂಡ್ ಲಾರ್ಡ್‌ನ ಎರಡನೇ ಹಾಡಾಗಿದ್ದು, ಧಾರವಾಡದಲ್ಲಿ ಬಿಡುಗಡೆ ಮಾಡಿದೆ.
ರಿತನ್ಯಾ ಈ ಸಿನಿಮಾದಲ್ಲಿ ಭಾಗ್ಯ ಎಂಬ ಪಾತ್ರ ಮಾಡಿದ್ದು, ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಿತನ್ಯಾ ವಿಜಯ್‌ಕುಮಾರ್ ಹಾಗೂ ಶಿಶಿರ್ ಬೈಕಾಡಿ ಕಾಣಿಸಿಕೊಂಡಿರುವ ರೋಮಾಂಚಕ ಹಾಡು ಆನಂದ್ ಆಡಿಯೊ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ಲ್ಯಾಂಡ್‌ಲಾರ್ಡ್ ಸಿನಿಮಾದ ಮೂಲಕ ರಿತನ್ಯಾ ವಿಜಯ್‌ಕುಮಾರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.
ಇದೇ ಹಾಡು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ ರೋಮಂಚಕ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಜನವರಿ 23ರಂದು ಲ್ಯಾಂಡ್‌ಲಾರ್ಡ್ ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನಿರ್ದೇಶಕ ಜಡೇಜ ಕೆ.ಹಂಪಿ ನಿರ್ದೇಶನ ಮಾಡುತ್ತಿದ್ದು, ಕೆ.ವಿ ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ ಅವರು ನಿರ್ಮಾಣ ಮಾಡುತ್ತಿದ್ದಾರೆ.
