ಚಿತ್ರದುರ್ಗ,ಅ.16– ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ ನೀಡಿದ್ದಾರೆ.ರೇಣುಕಾಸ್ವಾಮಿ ಹತ್ಯೆಯಾದ ಸಂದರ್ಭದಲ್ಲಿ ಸಹನಾ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಕುಟುಂಬಸ್ಥರು ದುಃಖತಪ್ತರಾಗಿ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದಾರೆ.
ಈ ನಡುವೆ ತಡರಾತ್ರಿ ಸಹನಾ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗಂಡುಮಗುವಿಗೆ ಜನ ನೀಡಿದ್ದಾರೆ. ಇದರಿಂದಾಗಿ ಕುಟುಂಬಸ್ಥರು ತಮ ಮಗನೇ ಹುಟ್ಟಿ ಬಂದಷ್ಟು ಖುಷಿಪಟ್ಟಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ತಮ ಮಗ ಬದುಕಿದ್ದರೆ ಸಂತೋಷಪಡುತ್ತಿದ್ದ ಎಂದು ರೇಣುಕಾಸ್ವಾಮಿ ತಂದೆ-ತಾಯಿ ಕಣ್ಣೀರು ಹಾಕಿದ್ದಾರೆ.