Friday, October 18, 2024
Homeರಾಜ್ಯತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಕಾವೇರಿ ತೀರ್ಥೋದ್ಭವ, ಭಕ್ತರ ಹರ್ಷೋದ್ಗಾರ

ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಕಾವೇರಿ ತೀರ್ಥೋದ್ಭವ, ಭಕ್ತರ ಹರ್ಷೋದ್ಗಾರ

Cauvery theerthodbhava at Talacauvery

ಮಡಿಕೇರಿ,ಅ.17- ತಾಲೂಕಿನ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ 7 ಗಂಟೆ 40 ನಿಮಿಷ ತುಲಾ ಲಗ್ನದಲ್ಲಿ ತೀರ್ಥೋದ್ಭವವಾಯಿತು. ಭಕ್ತರಿಗೆ ತೀರ್ಥರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಿದ್ದು, ಮೂರು ಬಾರಿ ಉಕ್ಕಿ ಬಂದ ನಂತರ ಅರ್ಚಕರು ನೆರೆದಿರುವ ಭಕ್ತರಿಗೆ ಬ್ರಹ್ಮ ಕುಂಡಿಕೆಯಿಂದ ತೀರ್ಥ ಪ್ರೋಕ್ಷಣೆ ಮಾಡಿದರು.

ನಿಗದಿಯಂತೆ 7:40ಕ್ಕೆ ಸೂರ್ಯ ಕನ್ಯಾ ಲಗ್ನದಿಂದ ತುಲಾ ಲಗ್ನಕ್ಕೆ ಪ್ರವೇಶಿಸುತ್ತಿದ್ದಂತೆ ತೀರ್ಥೋದ್ಭವ ನೆರವೇರಿತು. ಬೆಳಿಗ್ಗೆ 6 ಗಂಟೆಯಿಂದಲೇ ನಿರಂತರವಾಗಿ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ವಿಶೇಷ ಪೂಜಾ ಪುನಸ್ಕಾರಗಳು ನಡೆದವು.ಕಾವೇರಿ ಮಾತೆಯನ್ನು ಆಹ್ವಾನಿಸಲು ವಿವಿಧ ಪೂಜಾ ಕೈಂಕಾರ್ಯಗಳನ್ನು ಅರ್ಚಕರ ತಂಡ ಕೈಗೊಂಡಿತ್ತು.

ರಾಜ್ಯದ ನಾನಾ ಭಾಗಗಳಿಂದ ಹಾಗೂ ಬೇರೆ ನೆರೆರಾಜ್ಯ ತಮಿಳುನಾಡು, ಕೇರಳದಿಂದ ಸಹಸ್ರ ಸಂಖ್ಯೆಯಲ್ಲಿ ಭಕ್ತರ ಆಗಮಿಸಿದ್ದರು. ಇನ್ನೂ ತೀರ್ಥ ರೂಪಿಣಿ ಕಾವೇರಿ ಮಾತೆಯನ್ನು ಕಣ್ತುಂಬಿಕೊಳ್ಳಲು ಭಕ್ತಗಣ ಕಾತುರದಿಂದ ಕಾದು, ಉಕ್ಕಿ ಬಾ ಕಾವೇರಮ್ಮ, ಕಾವೇರಿ ಬಾಳು ಎಂದು ಭಜಿಸುತ್ತಿದ್ದರು. ಬ್ರಹ್ಮ ಕುಂಡಿಕೆಯ ಬಳಿ ಸಾವಿರಾರು ಜನ ಭಕ್ತರು ನೆರೆದಿದ್ದರು.

ಕೊಡವ ಧಿರಿಸಿನಲ್ಲಿ ಬಂದ ಭಕ್ತರು ಕಾವೇರಿ ಸ್ಮರಣೆ ಮಾಡಿದರುತೀರ್ಥೋದ್ಭವಕ್ಕೆ ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಆಗಮಿಸಿ ಪೂಜೆ ಸಲ್ಲಿಸಿದರು. ಜಿಲ್ಲಾಡಳಿತದಿಂದ ಭಕ್ತರ ಅನುಕೂಲಕ್ಕಾಗಿ ಹಲವು ವ್ಯವಸ್ಥೆ ಮಾಡಲಾಗಿತ್ತು.ಮಡಿಕೇರಿಯಲ್ಲಿ ಹಬ್ಬದ ವಾತಾವರಣ ಕಂಡುಬಂತು

RELATED ARTICLES

Latest News