ಬೆಂಗಳೂರು,ಅ.17- ಕೇಂದ್ರದಲ್ಲಿ ನಾನು ಸಚಿವನಿದ್ದಾಗ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 4 ಮಹರ್ಷಿ ವಾಲ್ಮೀಕಿ ಹಾಸ್ಟೆಲ್ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದು, ಇದರಿಂದ ಬಡ ಮಕ್ಕಳ ವಿಧ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ಹೇಳೀದರು.
ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಶ್ರೀ ಮಹರ್ಶಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಸಚಿವನಾಗಿದ್ದಾಗ ಕೋಲಾರ ಕ್ಷೇತ್ರದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಹೆಚ್.ಆಂಜನೇಯರ ಸಹಕಾರದಿಂದ ಈ ಅಭಿವೃದ್ದಿ ಕಾರ್ಯ ಮಾಡಲಾಯಿತು. ಅಂದಿನಿಂದ ಇಂದಿನವರೆಗೂ ಹಳ್ಳಿಗಳಲ್ಲಿ ಯಾವುದೇ ಸಮಸ್ಯೆಗಳು ಇದ್ದಲ್ಲಿ ವಾಲ್ಮೀಕಿ ಸಮಾಜದವರು ತಾಯಿ ಸ್ಥಾನದಲ್ಲಿದ್ದು ಸಹಕರಿಸುತ್ತಾರೆ ಎಂದರು.
ಅವರೊಂದಿಗೆ ನಮ್ಮ ಸಮುದಾಯ ಜೊತೆಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸಿ ಅವರ ಪರವಾಗಿ ನಮ್ಮ ಸಮುದಾಯಗಳು ಇರುತ್ತವೆ. ತಾವು ಇನ್ನಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮುದಾಯಗಳಿಗೆ ಕಲ್ಪಿಸಿ ಸಮುದಾಯಗಳ ಬೆಳವಣಿಗೆಗೆ ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾ ನಂದಪುರಿ ಶ್ರೀಗಳ ದಿವ್ಯಸಾನಿದ್ಯ ವಹಿಸಿದ್ದರು. ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ,, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು, ಸಮುದಾಯದ ಮುಖಂಡರು ಹಾಜರಿದ್ದರು