ಬೆಂಗಳೂರು,ಜ.16- ಕರ್ನಾಟಕ ದಿವಾಳಿಯಾಗಿಲ್ಲ ಎಂದು ಸುಳ್ಳು ಹೇಳುವುದನ್ನು ನಿಲ್ಲಿಸಿ, ಕೂಡಲೇ ಕರ್ನಾಟಕ ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬಹಿರಂಗ ಸವಾಲು ಹಾಕಿದ್ದಾರೆ.
ತಮ ಸಾಮಾಜಿಕ ಜಾಲ ತಾಣಗಳ ಎ್ಸ್‌ನಲ್ಲಿ ಪ್ಟೋ್ ಮಾಡಿರುವ ಅವರು, ನರ್ಸ್ ಗಳಿಗೆ ವೇತನ ನೀಡುವುದಕ್ಕೂ ದಿವಾಳಿ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ!!ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ 30 ಸಾವಿರ ಒಳಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ 3 ತಿಂಗಳಿಂದ ಸಂಬಳವಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದು ಸಿಎಂ ಸಿದ್ದರಾಮಯ್ಯ ಅವರ ತುಂಬಿ ತುಳುಕುತ್ತಿರುವ ಬೊಕ್ಕಸದ ಅಸಲಿ ಹಣೆಬರಹ. ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಒತ್ತಾಯಿಸಿದ್ದಾರೆ.
