ಜೈಪುರ, ಅ.18- ಇಲ್ಲಿನ ದೇವಸ್ಥಾನವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿದ ಹಿನ್ನಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ಗೆ ಸೇರಿದ ಹತ್ತು ಮಂದಿ ಗಾಯಗೊಂಡಿದ್ದಾರೆ.
ಶರದ್ ಪೂರ್ಣಿಮೆ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗ್ರಣ ಕಾರ್ಯಕ್ರಮ ನಡೆಯುತ್ತಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು.
ಈ ವಿಷಯದ ಬಗ್ಗೆ ವಾಗ್ವಾದದ ನಂತರ, ಆರೋಪಿಗಳು ಇತರರನ್ನು ಕರೆದು ಜನರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದರು, ಇದರಲ್ಲಿ 10 ಆರ್ಎಸ್‌ಎಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.
ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಆರೋಪಿ ನಸೀಬ್ ಚೌಧರಿ ಮತ್ತು ಆತನ ಮಗನನ್ನು ವಶಕ್ಕೆ ಪಡೆಯಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಮತ್ತು ಹೆಚ್ಚಿನ ತನಿಖೆಯನ್ನು ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಕೆಲವರು ದೆಹಲಿ-ಅಜೀರ್ ರಾಷ್ಟ್ರೀಯ ಹೆದ್ದಾರಿಯನ್ನು ಕೆಲಕಾಲ ಪ್ರತಿಭಟನೆ ನಡೆಸಿ ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.