Monday, November 25, 2024
Homeರಾಜಕೀಯ | Politicsಮುಡಾ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ : ಡಿ.ಕೆ.ಸುರೇಶ್‌

ಮುಡಾ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ : ಡಿ.ಕೆ.ಸುರೇಶ್‌

ED Raid on Muda is politically motivated: DK Suresh

ಬೆಂಗಳೂರು,ಆ.18- ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ರಾಜಕೀಯ ಪ್ರೇರಿತ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಪೂರ್ಣ ರಾಜಕೀಯಪ್ರೇರಿತವಾಗಿದೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಈಗಾಗಲೇ ಲೋಕಾಯುಕ್ತರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ದಾಳಿ ನಡೆದಿದೆ ಎಂದರು.

ಪ್ರಕರಣದಲ್ಲಿ ಹಣಕಾಸಿನ ವಹಿವಾಟು ನಡೆದಿಲ್ಲ. ಆ ಕುರಿತು ಎಲ್ಲಿಯೂ ಪ್ರಸ್ತಾಪವೂ ಇಲ್ಲ. ಜಾರಿ ನಿರ್ದೇಶನಾಲಯ 15 ದಿನಗಳ ಹಿಂದೆಯೇ ಪ್ರಕರಣ ದಾಖಲು ಮಾಡಿತ್ತು. ನಿಯಮಾನುಸಾರ ಅವರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ ಅವರಿಗೆ ಏನೂ ಸಿಗುವುದಿಲ್ಲ ಎಂದರು.

ಕೇಂದ್ರ ಸರ್ಕಾರ ಸಿಬಿಐ, ಜಾರಿ ನಿರ್ದೇಶನಾಲಯಗಳನ್ನು ವಿರೋಧ ಪಕ್ಷಗಳ ವಿರುದ್ಧ ಅಸ್ತ್ರವಾಗಿ ಬಳಕೆ ಮಾಡುತ್ತಿದೆ. ಕಳೆದ 10 ವರ್ಷಗಳಿಂದಲೂ ಹಲವಾರು ದಾಳಿ ಹಾಗೂ ಪ್ರಕರಣಗಳು ಸಾಮಾನ್ಯವಾಗಿದೆ. ಇತ್ತೀಚೆಗೆ ನಾಗೇಂದ್ರರನ್ನು ಇಡಿಯವರು ಬಂಧಿಸಿದ್ದರು. ಕೊನೆಗೆ ಒಂದಲ್ಲ ಒಂದು ದಿನ ಅವರಿಗೆ ಸತ್ಯ ಅರಿವಾಗುತ್ತದೆ ಎಂದು ಹೇಳಿದರು.

ಚನ್ನಪಟ್ಟಣ ವಿಧಾನಸಭೆಯ ಉಪಚುನಾವಣೆ ತಯಾರಿಗೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ತಮ ಸಹೋದರ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಮಾತುಕತೆಯಾಗಿದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಜನ ನಮಗೆ ವಿಶ್ರಾಂತಿ ನೀಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಕಳೆದ ಮೂರು ತಿಂಗಳಿನಿಂದಲೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರವನ್ನು ಗೆಲ್ಲಲು ಎಲ್ಲಾ ರೀತಿಯ ತಯಾರಿಗಳಾಗಿವೆ ಎಂದು ಹೇಳಿದರು.

ಟಿಕೆಟ್‌ಗಾಗಿ ಹಣ ವಸೂಲಿ ಮಾಡಿರುವ ಆರೋಪ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಸಹೋದರರ ಮೇಲೆ ಪ್ರಕರಣ ದಾಖಲಾಗಿರುವುದರ ಬಗ್ಗೆ ಬಿಜೆಪಿಯವರು ಮುಕ್ತವಾಗಿ ಮಾತನಾಡಬೇಕು. ಕಾಂಗ್ರೆಸ್‌‍ನವರು ಚರ್ಚೆ ಮಾಡಿದರೆ ರಾಜಕೀಯ ಎನ್ನುತ್ತಾರೆ. ಅವರೇ ಪಕ್ಷದ ನಾಯಕರು ದೂರು ನೀಡಿದ್ದಾರೆ. ಇದಕ್ಕೆ ಬಿಜೆಪಿಯವರು ಸ್ಪಷ್ಟನೆ ನೀಡಲಿ ಎಂದರು.

RELATED ARTICLES

Latest News