Thursday, April 16, 2026
Homeರಾಷ್ಟ್ರೀಯಮತದಾರರ ಹೆಸರು ನಾಪತ್ತೆ : ಚುನಾವಣಾ ಸೋಲಿನ ಬೆನ್ನಲ್ಲೇ ರಾವತ್‌ ರೋಧನೆ

ಮತದಾರರ ಹೆಸರು ನಾಪತ್ತೆ : ಚುನಾವಣಾ ಸೋಲಿನ ಬೆನ್ನಲ್ಲೇ ರಾವತ್‌ ರೋಧನೆ

Mumbai BMC polls: Shiv Sena leader Sanjay Raut flags missing voter names

ಮುಂಬೈ, ಜ.16– ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಸಾವಿರಾರು ಜನರ ಹೆಸರುಗಳು ಕಾಣೆಯಾಗಿದ್ದು ಇವಿಎಂ ಯಂತ್ರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಉದ್ದವ್‌ ಶಿವಸೇನೆ ಬಣದ ನಾಯಕ ಸಂಜಯ್‌ ರಾವತ್‌ ಆರೋಪ ಮಾಡಿದ್ದಾರೆ. ಬೃಹನ್‌ಮುಂಬೈ ಮಹಾನಗರಪಾಲಿಕೆ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ಸಮಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಂಬೈನಂತಹ ನಗರದಲ್ಲಿ ನಡೆಯುತ್ತಿರುವ ಮತದಾನದ ಮಾದರಿ ಗಂಭೀರ ವಿಷಯವಾಗಿದೆ ಎಂದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ, ಎಂಎನ್‌ಎಸ್‌‍, ಕಾಂಗ್ರೆಸ್‌‍ಗೆ ಮತ ಚಲಾಯಿಸಿದ ಸಾವಿರಾರು ಜನರ ಹೆಸರುಗಳು ಕಾಣೆಯಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ದೂರಿದರು. ಇವಿಎಂ ಯಂತ್ರ ಸರಿಯಾಗಿ ಕೆಲಸ ಮಾಡುವುದಿಲ್ಲ. ಚುನಾವಣಾ ಆಯೋಗ ನಮ್ಮ ಮಾತನ್ನು ಕೇಳಲು ಸಿದ್ಧವಾಗಿಲ್ಲ. ನಿನ್ನೆ ಹಿರಿಯ ಬಿಜೆಪಿ ನಾಯಕರು ಮತ್ತು ಚುನಾವಣಾ ಆಯೋಗದ ಸಿಬ್ಬಂದಿ ನಡುವೆ ಸಭೆ ನಡೆದಿದೆ. ನೀತಿ ಸಂಹಿತೆ ಇನ್ನೂ ಜಾರಿಯಲ್ಲಿರುವಾಗ ಈ ಸಭೆ ಹೇಗೆ ನಡೆದಿದೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಚುನಾವಣೆ ಪೂರ್ಣಗೊಳ್ಳುವ ಮೊದಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಬಿಜೆಪಿ ಆಗಲೇ ತನ್ನ ವಿಜಯವನ್ನು ಆಚರಿಸಲು ಪ್ರಾರಂಭಿಸಿದು ಏಕೆ ಎಂದು ರಾವತ್‌ ಕಿಡಿಕಾರಿದರು.

RELATED ARTICLES

Latest News